ಬೆಂಗಳೂರು: ನಗರದಲ್ಲಿ ಇಂದು 2,718 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 17,60,176ಕ್ಕೆ ಏರಿಕೆಯಾಗಿದೆ.
ಇದೇ ಸಮಯದಲ್ಲಿ ಬೆಂಗಳೂರಿನ 6,726 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 17,07,853ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಗೆ 15 ಜನ ಸಾವನ್ನಪ್ಪಿದ್ದು, ಈವೆರಗೂ ಒಟ್ಟು 16,691ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 35,631 ಸಕ್ರಿಯ ಪ್ರಕರಣಗಳಿವೆ.
Kshetra Samachara
07/02/2022 08:15 pm