ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಭಾರಿ ಇಳಕೆ ಕಂಡಿದೆ. ನಗರದಲ್ಲಿ ಇಂದು 1,059 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 17,70,868ಕ್ಕೆ ಏರಿಕೆಯಾಗಿದೆ.
ಇದೇ ಸಮಯದಲ್ಲಿ ಬೆಂಗಳೂರಿನ 2,501 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 17,39,868ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಗೆ 7 ಜನ ಸಾವನ್ನಪ್ಪಿದ್ದು, ಈವೆರಗೂ ಒಟ್ಟು 16,769 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 14,230 ಸಕ್ರಿಯ ಪ್ರಕರಣಗಳಿವೆ.
Kshetra Samachara
13/02/2022 08:04 pm