ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು 368 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 17,77,093ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಇದೇ ಸಮಯದಲ್ಲಿ ಬೆಂಗಳೂರಿನ 849 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 17,55,476ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಗೆ 15 ಜನ ಸಾವನ್ನಪ್ಪಿದ್ದು, ಈವೆರಗೂ ಒಟ್ಟು 16,857 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 4,759 ಸಕ್ರಿಯ ಪ್ರಕರಣಗಳಿವೆ.
Kshetra Samachara
23/02/2022 09:08 pm