ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು 150 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 17,78,672ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಇದೇ ಸಮಯದಲ್ಲಿ ಬೆಂಗಳೂರಿನ 393 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 17,58,748ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಗೆ ಮೂವರು ಸಾವನ್ನಪ್ಪಿದ್ದು, ಈವೆರಗೂ ಒಟ್ಟು 16,920 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 3,003 ಸಕ್ರಿಯ ಪ್ರಕರಣಗಳಿವೆ.
Kshetra Samachara
01/03/2022 07:56 pm