ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು 61 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 17,80,397ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಇದೇ ಸಮಯದಲ್ಲಿ ಬೆಂಗಳೂರಿನ 229 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 17,61,500ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಯಿಂದ ಯಾವುದೇ ಸಾವು ಸಂಭವಿಸಿಲ್ಲ. ಈವರೆಗೂ ಒಟ್ಟು 16,942 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 1,954 ಸಕ್ರಿಯ ಪ್ರಕರಣಗಳಿವೆ.
Kshetra Samachara
14/03/2022 09:00 pm