ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು 97 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 17,80,595ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಇದೇ ಸಮಯದಲ್ಲಿ ಬೆಂಗಳೂರಿನ 280 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 17,61,911ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಯಿಂದ ಇಬ್ಬರು ಸಾವನ್ನಪ್ಪಿದ್ದಾರೆ. ಈವರೆಗೂ ಒಟ್ಟು 16,945 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 1,738 ಸಕ್ರಿಯ ಪ್ರಕರಣಗಳಿವೆ.
Kshetra Samachara
16/03/2022 09:15 pm