ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು 100 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 17,83,880ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಇದೇ ಸಮಯದಲ್ಲಿ ಬೆಂಗಳೂರಿನ 103 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 17,65,189ಕ್ಕೆ ಏರಿಕೆ ಕಂಡಿದೆ. ಇನ್ನು ಸೋಂಕಿನಿಂದ ಇಂದು ಯಾವುದೇ ಸಾವು ಸಂಭವಿಸಿಲ್ಲ. ಈವರೆಗೂ ಒಟ್ಟು 16,962 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 1,728 ಸಕ್ರಿಯ ಪ್ರಕರಣಗಳಿವೆ.
Kshetra Samachara
03/05/2022 07:41 pm