ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಕೊರೊನಾ ರೂಪಾಂತರಿ ಪತ್ತೆಗೆ ಕೊಳಚೆ ನೀರಿನ ಜೀನೋಮಿಕ್ ಸೀಕ್ವೆನ್ಸಿಂಗ್ ಟೆಸ್ಟ್

ವರದಿ - ಗಣೇಶ್ ಹೆಗಡೆ

ಬೆಂಗಳೂರು - ಕೊರೊನಾ ರೂಪಾಂತರಿ ಸೋಂಕು ಪತ್ತೆ ಹಚ್ಚಲು ನಗರದ 34 ತ್ಯಾಜ್ಯ ನೀರಿನ ಸಂಸ್ಕರಣಾ ಘಟಕ(STP)ಗಳ ಕೊಳಚೆ ನೀರನ್ನು ಮೇ 5ರಿಂದ ಜೀನೋಮಿಕ್ ಸೀಕ್ವೆನ್ಸಿಂಗ್ ಪರೀಕ್ಷೆಗೆ ಒಳಪಡಿಸಲು ಬಿಬಿಎಂಪಿ ಆರೋಗ್ಯ ವಿಭಾಗದ ಅಧಿಕಾರಿಗಳು ಮುಂದಾಗಿದ್ದಾರೆ.

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ನಿನ್ನೆ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ಡಾ. ಕೆ.ವಿ.ತ್ರಿಲೋಕ್ ಚಂದ್ರ ನೇತೃತ್ವದಲ್ಲಿ ಜಲಮಂಡಳಿ, ಖಾಸಗಿ ಪ್ರಯೋಗಾಲಯಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಲಾಯಿತು. ಕೊಳಚೆ ನೀರಿನ ಜೀನೋಮಿಕ್ ಪರೀಕ್ಷೆ ಬಗ್ಗೆ ಚರ್ಚಿಸಲಾಯಿತು.

ಈ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಕೋವಿಡ್ 3ನೇ ಅಲೆಯ ಬಗ್ಗೆ ಕೊಳಚೆ ನೀರಿನ ಪರೀಕ್ಷೆಯಿಂದ 15 ದಿನ ಮೊದಲೇ ಪತ್ತೆ ಮಾಡಲಾಗಿತ್ತು. ಹೀಗಾಗಿ, ಇದೇ ಮಾದರಿ ಅನುಸರಿಸಿ ನಗರದಲ್ಲಿ ಜನರು ಬಳಸಿದ ನೀರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ.

ಈ ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟ ರಿನ ಮಾದರಿಗಳಲ್ಲಿ ಹೊಸ ರೂಪಾಂತರಿ ಪ್ರಬೇಧದ ಪತ್ತೆಗಾಗಿ ಜೀನೋಮಿಕ್ ಸೀಕ್ವೆನ್ಸಿಂಗ್ ಪರೀಕ್ಷೆ ಮಾಡುವ ಬಗ್ಗೆ ತೀರ್ಮಾನಿಸಲಾಯಿತು ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

ಕೋವಿಡ್ ಗಂಭೀರ ರೋಗ ಲಕ್ಷಣಗಳಿಲ್ಲದ ವ್ಯಕ್ತಿಯು ಬಳಸಿದ ನೀರಿನಲ್ಲಿಯೂ ಸೋಂಕು ಪತ್ತೆಯಾಗುತ್ತದೆ.

ಹೀಗಾಗಿ, ಪಾಲಿಕೆಯ 198 ವಾರ್ಡ್ ಗಳಲ್ಲಿನ ಕೊಳಚೆ ನೀರನ್ನು ಕೂಡ ಪರೀಕ್ಷೆ ಮಾಡಲಾಗುತ್ತಿದೆ. ಇದಕ್ಕೆ ಪಾಲಿಕೆಯ ಎಲ್ಲ ವಾರ್ಡ್ ಗಳ ಎಂಜಿನಿಯರ್ ಗಳು, ಆರೋಗ್ಯ ವೈದ್ಯಾಧಿಕಾರಿಗಳು, ಆರೋಗ್ಯ ಪರಿವೀಕ್ಷಕರು ಹಾಗೂ ಜಲಮಂಡಳಿಯ ಅಧಿಕಾರಿಗಳು ಅಗತ್ಯ ಸಹಕಾರ ನೀಡಬೇಕು. ಈ ಪರೀಕ್ಷೆಯಿಂದ ಕೋವಿಡ್ ಸೋಂಕು ರೂಪಾಂತರವಾದ ಬಗ್ಗೆ 15 ದಿನಗಳ ಮೊದಲೇ ತಿಳಿದುಕೊಳ್ಳಲು ಸಾಧ್ಯ.

Edited By : Nagesh Gaonkar
PublicNext

PublicNext

05/05/2022 07:46 pm

Cinque Terre

35.36 K

Cinque Terre

0

ಸಂಬಂಧಿತ ಸುದ್ದಿ