ಬೆಂಗಳೂರು: ರಾಜ್ಯದ ರಾಜಧಾನಿಯಲ್ಲಿ ಇಂದು ಮಹಾನಗರದಲ್ಲಿ 89 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 17,84,586ಕ್ಕೆ ಏರಿಕೆಯಾಗಿದೆ.
ಇನ್ನು 91ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 17,65,784ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು ಕೊರೊನಾ ಸೋಂಕಿನಿಂದ ಸಾವು ಸಂಭವಿಸಿಲ್ಲ. ಈವರೆಗೂ ಒಟ್ಟು 16,962 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 1,839 ಸಕ್ರಿಯ ಪ್ರಕರಣಗಳಿವೆ.
Kshetra Samachara
08/05/2022 10:39 pm