ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು 89 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 17,85,543ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಇದೇ ಸಮಯದಲ್ಲಿ ಬೆಂಗಳೂರಿನ 131 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 17,66,812ಕ್ಕೆ ಏರಿಕೆ ಕಂಡಿದೆ. ಇನ್ನು ಸೋಂಕಿನಿಂದ ಇಂದು ಯಾವುದೇ ಸಾವು ಸಂಭವಿಸಿಲ್ಲ. ಈವರೆಗೂ ಒಟ್ಟು 16,962 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 1,768 ಸಕ್ರಿಯ ಪ್ರಕರಣಗಳಿವೆ.
Kshetra Samachara
16/05/2022 07:54 pm