ಬೆಂಗಳೂರು: ರಾಜ್ಯದ ರಾಜಧಾನಿಯಲ್ಲಿ ಇಂದು 89 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 17,85,955ಕ್ಕೆ ಏರಿಕೆಯಾಗಿದೆ.
ಇನ್ನು 149ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 17,67,400ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು ಕೊರೊನಾ ಸೋಂಕಿನಿಂದ ಸಾವು ಸಂಭವಿಸಿಲ್ಲ. ಈವರೆಗೂ ಒಟ್ಟು 16,963 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 1,591ಸಕ್ರಿಯ ಪ್ರಕರಣಗಳಿವೆ.
Kshetra Samachara
20/05/2022 09:45 pm