ಬೆಂಗಳೂರು: ರಾಜ್ಯದ ರಾಜಧಾನಿಯಲ್ಲಿ ಇಂದು 142 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 17,86,812ಕ್ಕೆ ಏರಿಕೆಯಾಗಿದೆ.
ಇನ್ನು 166 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 17,68,142ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು ಕೊರೊನಾ ಸೋಂಕಿನಿಂದ ಸಾವು ಸಂಭವಿಸಿಲ್ಲ. ಈವರೆಗೂ ಒಟ್ಟು 16,963 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 1,706 ಸಕ್ರಿಯ ಪ್ರಕರಣಗಳಿವೆ.
Kshetra Samachara
26/05/2022 08:13 pm