ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು 159 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 17,87,539ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಇದೇ ಸಮಯದಲ್ಲಿ ಬೆಂಗಳೂರಿನ 93 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 17,68,566ಕ್ಕೆ ಏರಿಕೆ ಕಂಡಿದೆ. ಇನ್ನು ಸೋಂಕಿನಿಂದ ಇಂದು ಯಾವುದೇ ಸಾವು ಸಂಭವಿಸಿಲ್ಲ. ಈವರೆಗೂ ಒಟ್ಟು 16,963 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 2,009 ಸಕ್ರಿಯ ಪ್ರಕರಣಗಳಿವೆ.
Kshetra Samachara
30/05/2022 09:55 pm