ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ನಾಳೆಯಿಂದ 18 ವರ್ಷ ಮೇಲ್ಪಟ್ಟವರಿಗೆ ಉಚಿತ ಬೂಸ್ಟರ್ ಡೋಸ್ ಲಸಿಕೆ

ಬೆಂಗಳೂರು: ಶುಕ್ರವಾರದಿಂದ ಮುಂದಿನ 75 ದಿನಗಳ ವಿಶೇಷ ಅಭಿಯಾನದ ಅಡಿಯಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ವಯಸ್ಕರಿಗೆ ಕೊರೊನಾ ವೈರಸ್ ಲಸಿಕೆಯ ಬೂಸ್ಟರ್ ಡೋಸ್‌ಗಳನ್ನು ಸರ್ಕಾರಿ ಕೇಂದ್ರಗಳಲ್ಲಿ ಉಚಿತವಾಗಿ ನೀಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ಮಹತ್ವದ ಘೋಷಣೆ ಹೊರಡಿಸಿದೆ.

ಮೂರನೇ ಡೋಸ್ ವ್ಯಾಪ್ತಿಯನ್ನು ಸುಧಾರಿಸುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದ್ದು, ಭಾರತದ ಸ್ವಾತಂತ್ರ್ಯದ 75ನೇ ವಾರ್ಷಿಕೋತ್ಸವವನ್ನು ಗುರುತಿಸಲು ಸರ್ಕಾರದ 'ಆಜಾದಿ ಕಾ ಅಮೃತ್ ಮಹೋತ್ಸವ' ಆಚರಣೆಯ ಭಾಗವಾಗಿ ಈ ಅಭಿಯಾನ ನಡೆಯಲಿದೆ. ಇಲ್ಲಿಯವರೆಗೆ, 18-59 ವಯೋಮಾನದ 77 ಕೋಟಿ ಜನಸಂಖ್ಯೆಯ ಗುರಿಯ ಶೇಕಡಾ 1ಕ್ಕಿಂತ ಕಡಿಮೆ ಜನರಿಗೆ ಬೂಸ್ಟರ್ ಡೋಸ್ ಅನ್ನು ನೀಡಲಾಗಿದೆ. ಹಾಗಿದ್ದರೂ 60 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಅಂದಾಜು 16 ಕೋಟಿ ಅರ್ಹ ಜನಸಂಖ್ಯೆಯ ಸುಮಾರು 26 ಪ್ರತಿಶತ ಮತ್ತು ಆರೋಗ್ಯ ಮತ್ತು ಮುಂಚೂಣಿಯ ಕಾರ್ಯಕರ್ತರು ಬೂಸ್ಟರ್ ಡೋಸ್ ಅನ್ನು ಸ್ವೀಕರಿಸಿದ್ದಾರೆ ಎಂದು ವರದಿಯಾಗಿದೆ.

ವರದಿ: ಗೀತಾಂಜಲಿ

Edited By : Vijay Kumar
PublicNext

PublicNext

14/07/2022 06:23 pm

Cinque Terre

17.17 K

Cinque Terre

0

ಸಂಬಂಧಿತ ಸುದ್ದಿ