ಬೆಂಗಳೂರು: ರಾಜ್ಯದ ರಾಜಧಾನಿಯಲ್ಲಿ ಇಂದು 1,013 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 18,21,451ಕ್ಕೆ ಏರಿಕೆಯಾಗಿದೆ.
ಇನ್ನು 1,104 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 17,97,577ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು ಕೊರೊನಾ ಸೋಂಕಿನಿಂದ ಸಾವು ಸಂಭವಿಸಿಲ್ಲ. ಈವರೆಗೂ ಒಟ್ಟು 16,972ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 6,901 ಸಕ್ರಿಯ ಪ್ರಕರಣಗಳಿವೆ.
Kshetra Samachara
19/07/2022 10:07 pm