ಬೆಂಗಳೂರು: ನಿಯಮಿತವಾಗಿ ರಕ್ತದಾನದ ಅಭ್ಯಾಸ ಬೆಳೆಸಿಕೊಳ್ಳುವುದರಿಂದ ನಮ್ಮ ವೈಯಕ್ತಿಕ ಆರೋಗ್ಯಕ್ಕೂ ಹಾಗೂ ತುರ್ತು ಚಿಕಿತ್ಸೆಗೆ ರೋಗಿಗಳಿಗೂ ಅನುಕೂಲವಾಗುತ್ತದೆ. ಈ ಹಿನ್ನಲೆಯಲ್ಲಿ ಆರೋಗ್ಯವಂತರು ನಿಯಮಿತವಾಗಿ ರಕ್ತದಾನ ಮಾಡುವಂತಹ ಅಭ್ಯಾಸವನ್ನು ಬೆಳೆಸಿಕೊಳ್ಳಬೇಕು ಎಂದು ಕರ್ನಾಟಕ ಅರಣ್ಯ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಶ್ರೀಮತಿ ತಾರಾಅನೂರಾಧ ಕರೆ ನೀಡಿದರು.
ಇಂದು ಕರ್ನಾಟಕ ಅರಣ್ಯ ಅಭಿವೃದ್ದಿ ನಿಗಮದ ಕೇಂದ್ರ ಕಚೇರಿ ವನವಿಕಾಸ ಕಚೇರಿಯಲ್ಲಿ ನಿಗಮದ ಸುವರ್ಣ ಮಹೋತ್ಸವದ ಆಚರಣೆಯ ಅಂಗವಾಗಿ ಆಯೋಜಿಸಿದ್ದ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.
ಆರೋಗ್ಯವಂತ ವ್ಯಕ್ತಿಗಳು ಪ್ರತಿ ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದಾಗಿದೆ. ರಕ್ತದಾನ ಮಹಾದಾನಗಳಲ್ಲಿ ಒಂದು. ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲ. ತುರ್ತು ಚಿಕಿತ್ಸೆಗೆ ಒಳಗಾಗಿರುವ ರೋಗಿಗಳ ಅನುಕೂಲಕ್ಕಾಗಿ ರಕ್ತ ಬಹಳ ಅವಶ್ಯಕವಾಗಿರುತ್ತದೆ. ಅಲ್ಲದೆ, ರಕ್ತದಾನ ಮಾಡುವಂತಹ ವ್ಯಕ್ತಿಯ ಆರೋಗ್ಯವೂ ಬಹಳ ಚೆನ್ನಾಗಿರುತ್ತದೆ. ಈ ಹಿನ್ನಲೆಯಲ್ಲಿ ಆರೋಗ್ಯವಂತ ವ್ಯಕ್ತಿಗಳ ನಿಯಮಿತವಾಗಿ ರಕ್ತದಾನ ಮಾಡುವಂತಹ ಅಭ್ಯಾಸವನ್ನು ಬೆಳೆಸಿಕೊಳ್ಳಬೇಕು ಎಂದರು. ಶಿಬಿರದಲ್ಲಿ 60 ಕ್ಕೂ ಹೆಚ್ಚು ನಿಗಮದ ಅಧಿಕಾರಿಗಳು ಹಾಗೂ ನೌಕರರು ರಕ್ತದಾನ ಮಾಡಿದರು. ಈ ಸಂಧರ್ಭದಲ್ಲಿ ನಿಗಮದ ವ್ಯವಸ್ಥಾಪನ ನಿರ್ದೇಶಕರಾದ ರಾಧಾದೇವಿ ಐ.ಎಫ್.ಎಸ್ ಉಪಸ್ಥಿತರಿದ್ದರು. ರಕ್ತದಾನ ಮಾಡಿದವರಿಗೆ ಪ್ರಮಾಣಪತ್ರ ವನ್ನು ವಿತರಿಸಲಾಯಿತು.
Kshetra Samachara
23/06/2022 09:07 pm