ಬೆಂಗಳೂರು: ಗ್ರಾಮಾಂತರ ಜಿಲ್ಲೆ ಹೊಸಕೋಟೆ ನಗರದಲ್ಲಿ ತಲೆ ಎತ್ತಿದ್ದ ಅನಧಿಕೃತ GMS ಹೆಲ್ತ್ ಸೆಂಟರ್ ಮೇಲೆ DHO ತಿಪ್ಪೇಸ್ವಾಮಿ ದಾಳಿ ನಡೆಸಿ, ಸೂಕ್ತ ದಾಖಲೆಗಲಿಲ್ಲದ ಹಿನ್ನೆಲೆ ಆಸ್ಪತ್ರೆಯನ್ನು ಸೀಜ್ ಮಾಡಿದ್ದಾರೆ. ಜಿಲ್ಲಾ ಆರೋಗ್ಯಾಧಿಕಾರಿ ತಿಪ್ಪೇಸ್ವಾಮಿ ಹೊಸಕೋಟೆ ಪಟ್ಟಣದ ರಾಯಸಿಂಗ್ ಬಡಾವಣೆಯ GMS ಹೆಲ್ತ್ ಕೇರ್ ಸೆಂಟರ್ ಗೆ ಭೇಟಿ ನೀಡಿದ್ದರು.ಯಾವುದೇ ರೀತಿಯ ಕೆಪಿಎಂ ಲೈಸೆನ್ಸ್, ಆಸ್ಪತ್ರೆಯ ಲೈಸೆನ್ಸ್ ಇಲ್ಲದೆ ಅನಧಿಕೃತವಾಗಿ ಆಸ್ಪತ್ರೆ ನಡೆಸುತ್ತಿರುವುದು ಕಂಡು ಬಂದಿತ್ತು.
ಜಿಲ್ಲಾಧಿಕಾರಿಗಳ ಅದೇಶದ ಮೇರೆಹೆ ಜಿಲ್ಲಾ ಆರೋಗ್ಯಾಧಿಕಾರಿ ತಿಪ್ಪೇಸ್ವಾಮಿ, ತಾಲೂಕು ಆರೋಗ್ಯಾಧಿಕಾರಿ ವೀಣಾ ತಂಡದಿಂದ ದಾಳಿ ನಡೆದಿತ್ತು.
ಈ ವೇಳೆ ಆಸ್ಪತ್ರೆಯಲ್ಲಿ ಯಾವುದೇ ರೀತಿಯ ದಾಖಲೆ, ಸೂಕ್ತ ವೈದ್ಯರು, ನರ್ಸ್‌ಗಳು ಇರಲಿಲ್ಲ.ರೋಗಿಗಳ ಕೇಸ್‌ಶೇಟ್ ಸೇರಿದಂತೆ ಯಾವುದೇ ದಾಖಲೆ ಇರಲಿಲ್ಲ. ಸೂಕ್ತ ದಾಖಲೆ ಇಲ್ಲದ ಕಾರಣ, ಜಿಲ್ಲಾಧಿಕಾರಿಗಳ ಆದೇಶ ಹಿನ್ನೆಲೆ ತಾತ್ಕಾಲಿಕವಾಗಿ ಆಸ್ಪತ್ರೆ ಸೀಜ್ ಮಾಡಿದ್ದೇವೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ತಿಪ್ಪೇಸ್ವಾಮಿ ತಿಳಿಸಿದ್ದಾರೆ.
PublicNext
30/07/2022 08:15 am