ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 123 ಶಾಲಾ ಮಕ್ಕಳಿಗೆ ಕೊರೊನಾ ಸೋಂಕು ದೃಢ.

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ 1ನೇ ರಿಂದ 10 ತರಗತಿ ವ್ಯಾಸಂಗ ಮಾಡುತ್ತಿದ್ದ 123 ಮಕ್ಕಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ, ಕೊರೊನಾ ಸೋಂಕಿತರ ಮಕ್ಕಳ ಶಾಲೆಗೆ ತಾತ್ಕಾಲಿಕ ರಜೆಯನ್ನು ನೀಡಲಾಗಿದೆ,

ಕೊರೊನಾ ಮೂರನೇ ಅಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ರಮೇಣವಾಗಿ ಹೆಚ್ಚಾಗುತ್ತಿದೆ, ಇಲ್ಲಿಯವರೆಗೂ 1ನೇ ತರಗತಿಯಿಂದ 10 ನೇ ತರಗತಿ ವ್ಯಾಸಂಗ ಮಾಡುತ್ತಿರುವ 123 ಮಕ್ಕಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಮತ್ತು 42 ಶಿಕ್ಷಕರಿಗೆ ಕೊರೋನಾ ಪಾಸಿಟಿವ್ ಆಗಿದೆ, ಸೋಂಕಿತರನ್ನ ಐಸೋಲೇಷನ್ ಮಾಡಿ ಚಿಕಿತ್ಸೆಯನ್ನ ನೀಡಲಾಗುತ್ತಿದೆ.

ದೊಡ್ಡಬಳ್ಳಾಪುರ ತಾಲೂಕಿನ ದೇವಲ ಮಹರ್ಷಿ ಶಾಲೆಯ 25 ಮಕ್ಕಳಿಗೆ ಮತ್ತು ಕೊಂಗಾಡಿಯಪ್ಪ ಪ್ರಾಥಮಿಕ ಪಾಠಶಾಲೆಯ 18 ಮಕ್ಕಳಿಗೆ ಕೋವಿಡ್ ಸೋಂಕು ಧೃಡಪಟ್ಟಿದೆ, ಜಿಲ್ಲೆಯಲ್ಲಿ ಅತಿ ಹೆಚ್ಚು ಕೋವಿಡ್ ಪ್ರಕರಣ ದಾಖಲಾಗಿರುವುದು ಈ ಎರಡು ಶಾಲೆಗಳಲ್ಲಿ ಮಾತ್ರ , ಉಳಿದಂತೆ ಒಂದೆರಡು ಕೋವಿಡ್ ಪ್ರಕರಣಗಳು ಜಿಲ್ಲೆಯಲ್ಲಿನ ಶಾಲೆಗಳಲ್ಲಿ ಕಂಡು ಬಂದಿದೆ, ಶಾಲೆಗಳನ್ನು ಸ್ಯಾನಿಟೈಸ್ ಮಾಡಿ ತಾತ್ಕಾಲಿಕ ರಜೆಯನ್ನು ನೀಡಲಾಗಿದೆ.

ಕೋವಿಡ್ ನಿಯಂತ್ರಣಕ್ಕೆ ಜಿಲ್ಲಾಡಳಿತ ಅಗತ್ಯ ಕ್ರಮಗಳನ್ನ ತೆಗೆದುಕೊಳ್ಳಲಾಗಿದೆ, ಪೋಷಕರು ಆತಂಕಗೊಳ್ಳುವ ಅಗತ್ಯವಿಲ್ಲ, ಸೋಂಕಿತ ಮಕ್ಕಳಲ್ಲಿ ಯಾವುದೇ ರೀತಿಯ ರೋಗದ ಲಕ್ಷಣಗಳು ಕಂಡು ಬಂದಿಲ್ಲ, ಉಳಿದಂತೆ ಎಲ್ಲಾ ಶಾಲೆಗಳ ಮಕ್ಕಳು ಕೋವಿಡ್ ತಪಾಸಣೆ ಮಾಡಲಾಗುತ್ತಿದೆ ಎಂದು ಸಾರ್ವಜನಿಕರು ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಗಂಗಮಾರೇಗೌಡರು ತಿಳಿಸಿದ್ದಾರೆ.

Edited By : Manjunath H D
Kshetra Samachara

Kshetra Samachara

14/01/2022 04:33 pm

Cinque Terre

746

Cinque Terre

0

ಸಂಬಂಧಿತ ಸುದ್ದಿ