ಬೆಂಗಳೂರು:ರಾಜ್ಯದ ಶಾಲೆಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾ ಗುತ್ತಿರುವ ಹಿನ್ನೆಲೆಯಲ್ಲಿ ಸೋಂಕು ಹರಡದಂತೆ ಮುನ್ನೇಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ಶಿಕ್ಷಣ ಇಲಾಖೆ ಸೂಚಿಸಿದೆ.
ಬೆಂಗಳೂರು ನಗರದ ಕೆಲವು ಶಾಲೆಗಳ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಹರಡಿರುವುದರುವುದು ವರದಿಯಾದ ಹಿನ್ನೆಲೆಯಲ್ಲಿ ಸೋಂಕು ಹರಡದಂತೆ ಕ್ರಮತೆಗೆದುಕೊಂಡು ಶೈಕ್ಷಣಿಕ ಚಟುವಟಿಕೆಗಳನ್ನು ಪರ್ಯಾಯ ಮಾರ್ಗಗಳ ಮೂಲಕ ಮುಂದುವರಿಸುವಂತೆ ಸೂಚಿಸಿದೆ.
ಶಾಲೆಗಳ ಕರ್ತವ್ಯ-
- ಕೋವಿಡ್ ನಿಯಂತ್ರಣದ ಬಗ್ಗೆ ಮಕ್ಕಳ ಪೋಷಕರಿಗೆ, ಎಲ್ಲಾ ವಿದ್ಯಾರ್ಥಿಗಳಿಗೆ ತಿಳುವಳಿಕೆ ಮೂಡಿಸುವುದು.
- ಎಲ್ಲಾ ಶಿಕ್ಷಕರು, ಮುಖ್ಯ ಶಿಕ್ಷಕರು ಪ್ರತಿ ದಿನ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಕೋವಿಡ್ ಬಗ್ಗೆ ಅಗತ್ಯ ಅರಿವು ಮೂಡಿಸುವುದು
- ವಿದ್ಯಾರ್ಥಿಗಳು ಮನೆಯಿಂದಲೇ ಶುದ್ಧ ಬಿಸಿನೀರನ್ನು ತರುವಂತೆ ಸೂಚಿಸುವುದು
- 12-14 ವರ್ಷದ ಎಲ್ಲಾ ವಿದ್ಯಾರ್ಥಿಗಳು ಕೋವಿಡ್-19ರ ಲಸಿಕೆಯನ್ನು ಪಡೆದಿರುವ ಬಗ್ಗೆ ಪರಿಶೀಲಿಸುವುದು.
- ಪಡೆಯದೇ ಇದ್ದಲ್ಲಿ, ಆ ಮಕ್ಕಳಿಗೆ ಆರೋಗ್ಯ ಇಲಾಖೆಯಿಂದ ಕೊಡಿಸುವುದು
- ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕಿನ ಲಕ್ಷಣಗಳಿದ್ದರೇ, ಆ ವಿದ್ಯಾರ್ಥಿಯನ್ನು ಆರೋಗ್ಯ ಇಲಾಖೆಯ ಸ್ಥಳೀಯ ಆಸ್ಪತ್ರೆಗಳಲ್ಲಿ ಪೋಷಕರ ಉಪಸ್ಥಿತಿಯಲ್ಲಿ ತಪಾಸಣೆಗೆ ಒಳಪಡಿಸುವುದು
- ಕೋವಿಡ್ ಲಕ್ಷಣವಿರುವಂತ ವಿದ್ಯಾರ್ಥಿಯನ್ನು ತಾತ್ಕಾಲಿಕವಾಗಿ ಕೆಲವು ದಿನಗಳಿಗೆ ಮಾತ್ರ ಭೌತಿಕ ತರಗತಿಗಳಿಗೆ ಹಾಜರಾಗದಂತೆ ತಿಳಿಸುವುದು
- ಯಾವುದಾದರೂ ಶಾಲೆಯಲ್ಲಿ ತರಗತಿವಾರು 10ಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳಿಗೆ ಕೋವಿಡ್-19ರ ಲಕ್ಷಣಗಳು ಕಂಡು ಬಂದಲ್ಲಿ, ಸೋಂಕು ದೃಢಪಟ್ಟಲ್ಲಿ, ಕೂಡಲೇ ಅಂತಹ ಶಾಲಾ ಮುಖ್ಯೋಪಾಧ್ಯಾಯರು ಸಂಬಂಧಪಟ್ಟ ಕ್ಷೇತ್ರ ಶಿಕ್ಷಮಾಧಿಕಾರಿಗಳ ಹಾಗೂ ಜಿಲ್ಲಾ ಉಪನಿರ್ದೇಶಕರ ಪೂರ್ವಾನುಮತಿ ಪಡೆದು, ಶಾಲೆಗೆ ಎರಡು, ಮೂರು ದಿನಗಳಿಗೆ ರಜೆಯನ್ನು ಘೋಷಿಸುವುದು.
- ಆರೋಗ್ಯ ಇಲಾಖೆಯ ಸ್ಥಳೀಯ ಘಟಕ, ಜಿಲ್ಲಾಡಳಿತದ ಮಾರ್ಗದರ್ಶನದ, ಸಹಕಾರದೊಂದಿಗೆ ಸಂಪೂರ್ಣ ಶಾಲಾ ಕಟ್ಟಡವನ್ನು ಸ್ಯಾನಿಟೈಸ್ ಮಾಡಿಸುವುದು.
- ಶಾಲೆಗಳಲ್ಲಿ ಶಿಕ್ಷಕರು ಮುಖ್ಯ ಶಿಕ್ಷಕರು, ಸಿಬ್ಬಂದಿಗಳು ಕಡ್ಡಾಯವಾಗಿ ಮುಖ ಗವಸನ್ನು(ಮಾಸ್ಕ್) ಧರಿಸಿರತಕ್ಕದ್ದು.
- ಎರಡು ಡೋಸ್ ಲಸಿಕೆ ಹಾಕಿಸಿಕೊಂಡಿರಬೇಕು. 50 ವರ್ಷ ಮೇಲ್ಪಟ್ಟವರು ಮತ್ತು ಪೂರ್ವಭಾವಿ ಆರೋಗ್ಯ ಲಕ್ಷಣಗಳನ್ನು
(Premorbid Health Conditions ) ಹೊಂದಿರುವವರು ಅಗತ್ಯಾನುಸಾರ ಹೆಚ್ಚಿನ ಸುರಕ್ಷತಾ ಕ್ರಮಗಳನ್ನು ವಹಿಸತಕ್ಕದ್ದು.
- ಕೋವಿಡ್-19ರ ಸುರಕ್ಷತಾ, ಮುನ್ನಚ್ಚರಿಕೆ ಕ್ರಮಗಳು ವಹಿಸಿ ಶಾಲೆ ನಡೆಸುವ ಕುರಿತು ನಿಗದಿ ಪಡಿಸಿರುವ ಪ್ರಮಾಣಿತ ಕಾರ್ಯಾಚರಣೆ ವಿಧಾನದಂತೆ ( Standard Operating Procedure - SOP ) ಶಿಕ್ಷಕರು, ವಿದ್ಯಾರ್ಥಿಗಳ ಆರೋಗ್ಯ ರಕ್ಷಣೆಗೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದು.
PublicNext
17/06/2022 10:01 am