ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಾದಯಾತ್ರೆಗೆ ನಿಯೋಜನೆಗೊಂಡಿದ್ದ 42 ಪೊಲೀಸರಿಗೆ ಕೊರೊನಾ ಪಾಸಿಟಿವ್

ಬೆಂಗಳೂರು : ಮೇಕೆದಾಟು ಪಾದಯಾತ್ರೆ ಭದ್ರತೆಗೆ ನಿಯೋಜನೆಗೊಂಡಿದ್ದ 179 ಕೆಎಸ್ ಆರ್ ಪಿ ಪೈಕಿ 42 ಮಂದಿ ಪೊಲೀಸರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಕೊರೊನಾ ಸೋಂಕು ಕಾಣಿಸಿಕೊಂಡ 42 ಕೆಎಸ್ ಆರ್ ಪಿ ಪೊಲೀಸರು ಹೋಮ್ ಕ್ವಾರಂಟೈನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ರಾಜ್ಯ ಪೊಲೀಸ್ ಮೀಸಲು ಪಡೆ ಎಡಿಜಿಪಿ ಅಲೋಕ್ ಕುಮಾರ್ ಟ್ವೀಟರ್ ನಲ್ಲಿ ತಿಳಿಸಿದ್ದಾರೆ.

ಕಾವೇರಿ ನದಿ ತೀರವಾಗಿರುವ ಮೇಕೆದಾಟು ಯೋಜನೆ ಅನುಷ್ಕಾನಕ್ಕಾಗಿ ಒತ್ತಾಯಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಜ.9ರಿಂದ 10 ದಿನಗಳ ಕಾಲ ಮೇಕೆದಾಟುನಿಂದ ಬೆಂಗಳೂರಿನವರಗೆ ಪಾದಯಾತ್ರೆ ಹಮ್ಮಿಕೊಂಡಿತ್ತು.

ಪಾದಯಾತ್ರೆಯಲ್ಲಿ ಸಾವಿರಾರು ಜನರು ಭಾಗಿಯಾಗಿದ್ದರು. ಅಹಿತಕರ ಘಟನೆ ನಡೆಯದಂತೆ ಮೈಸೂರು ವಿಭಾಗದ 179 ಮಂದಿ ಕೆಎಸ್ ಆರ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಈ ಪೈಕಿ 42 ಮಂದಿಗೆ ಕೊರೊನಾ ವೈರಾಣು ದೃಢವಾಗಿದ್ದು ಎಲ್ಲರನ್ನು ಐಸೋಲೇಷನ್ ಗೆ ಒಳಪಡಿಸಲಾಗಿದೆ.

Edited By : Nirmala Aralikatti
PublicNext

PublicNext

20/01/2022 04:50 pm

Cinque Terre

20.62 K

Cinque Terre

0

ಸಂಬಂಧಿತ ಸುದ್ದಿ