ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಸರ್ಕಾರಿ ಆಸ್ಪತ್ರೆ ಖಾಲಿ ಇದ್ದರೂ ಕೊರೊನಾ ಸೋಂಕಿತರಿಗೆ ಖಾಸಗಿ ಚಿಕಿತ್ಸೆ !

ಬೆಂಗಳೂರು: ಕೊರೊನಾ ಸೋಂಕಿತರ ಚಿಕಿತ್ಸೆಗೆ ರಾಜಧಾನಿಯ ಸರ್ಕಾರಿ ಆಸ್ಪತ್ರೆಗಳಲ್ಲಿ ಒಂದು ಸಾವಿರಕ್ಕೂ ಅಧಿಕ ಹಾಸಿಗೆಗಳು ಖಾಲಿಯಿವೆ. ಆದರೂ 191 ಸೋಂಕಿತರಿಗೆ ಖಾಸಗಿ ಆಸ್ಪತ್ರೆಯಲ್ಲಿ ಸ್ವತಃ ಸರ್ಕಾರವೇ ಶುಲ್ಕ ಪಾವತಿಸಿ ಚಿಕಿತ್ಸೆ ಕೊಡಿಸುತ್ತಿದೆ!

ಕೊರೊನಾ ಸೋಂಕಿನ ಸಂದರ್ಭ ಒಮ್ಮೆಗೇ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಹೆಚ್ಚಳವಾಗಿ ಬೆಡ್ ಗಳ ಅಭಾವ ಸೃಷ್ಟಿಯಾಗಬಹುದು. ಈ ಸಂಬಂಧ ಮುಂಜಾಗ್ರತಾ ಕ್ರಮವಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಸರ್ಕಾರಿ ಕೋಟಾದಡಿ ಸೋಂಕಿತರಿಗೆ ಚಿಕಿತ್ಸೆ ವ್ಯವಸ್ಥೆ ಮಾಡಲಾಗಿತ್ತು. ಈ ಹಿಂದೆ ಸರ್ಕಾರಿ ಆಸ್ಪತ್ರೆಗಳಲ್ಲಿ ಭರ್ತಿಯಾದ ಬಳಿಕವಷ್ಟೇ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಸರ್ಕಾರ ಮಾಡ್ತಾಯಿತ್ತು.

ಆದರೆ, ಈ ವರ್ಷ ಆಸ್ಪತ್ರೆ ಸೇರುವವರ ಸಂಖ್ಯೆ ಗಣನೀಯವಾಗಿ ಇಳಿಮುಖವಾಗಿದೆ. ಸರ್ಕಾರಿ ಆಸ್ಪತ್ರೆಯಲ್ಲಿ 655 ಸಾಮಾನ್ಯಎಚ್ ಡಿಯು 398, ಐಸಿಯು 70, ವೆಂಟಿಲೇಟರ್ ಐಸಿಯು 123 ಬೆಡ್ ಗಳು ಲಭ್ಯವಿದೆ. ಆದರೂ ರಾಜ್ಯ ಸರ್ಕಾರ ಖಾಸಗಿ ಆಸ್ಪತ್ರೆಯಲ್ಲಿ ಸರ್ಕಾರಿ ಕೋಟಾ ಹಾಸಿಗೆಗಳನ್ನು ನೀಡಲಾರಂಭಿಸಿದೆ. ಸರ್ಕಾರವೇ ಈ ಅವಕಾಶ ನೀಡಿರುವ ಹಿನ್ನೆಲೆಯಲ್ಲಿ ಸೋಂಕಿತರು ಖಾಸಗಿ ಆಸ್ಪತ್ರೆಯ ಸರ್ಕಾರಿ ಕೋಟಾದಡಿಯ ಹಾಸಿಗೆಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಪ್ರಶ್ನಿಸಿದ್ರೆ ಬಿಬಿಎಂಪಿ ಖಾಸಗಿ ಆಸ್ಪತ್ರೆಗಳ ಪರವೇ ಬ್ಯಾಟಿಂಗ್ ಬೀಸುತ್ತಿದೆ.

Edited By : Nagesh Gaonkar
PublicNext

PublicNext

26/01/2022 03:24 pm

Cinque Terre

30.6 K

Cinque Terre

0

ಸಂಬಂಧಿತ ಸುದ್ದಿ