ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋವಿಡ್ 4ನೇ ಅಲೆ: ಇಂದಿನಿಂದ ಕಟ್ಟುನಿಟ್ಟಿನ ನಿಯಮ ಜಾರಿಗೆ ಮುಂದಾದ ಬಿಬಿಎಂಪಿ

ಬೆಂಗಳೂರು - ಕೋವಿಡ್ ನಾಲ್ಕನೇ ಅಲೆಯ ವಿರುದ್ಧ ಹೋರಾಡಲು ಬಿಬಿಎಂಪಿ ಇಂದಿನಿಂದ ನಗರದಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ನಗರದ ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಇಲ್ಲದಿದ್ದರೆ 250 ರೂ. ದಂಡ ತೆರಬೇಕಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೋಂಕಿತರ ಪಾಥಮಿಕ ಸಂಪರ್ಕಿತರನ್ನು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಜನಸಂದಣಿಯಿರುವ ವ್ಯಾಪಾರ ಪ್ರದೇಶಗಳಲ್ಲಿ ಮಾರ್ಷಲ್‌ಗಳು ಗಸ್ತು ತಿರುಗುತ್ತಿದ್ದು, ಮಾಸ್ಕ್ ಮತ್ತು ವ್ಯಕ್ತಿಗತ ಅಂತರದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.

ಚಿತ್ರಮಂದಿರಗಳು, ಮಾಲ್, ರೆಸ್ಟೋರೆಂಟ್, ಹೋಟೆಲ್ ಹಾಗೂ ಇತರ ವಾಣಿಜ್ಯ ಸಂಸ್ಥೆಗಳಿಗೆ ತೆರಳುವವರು ಮಾಸ್ಕ್ ಮತ್ತು ವ್ಯಕ್ತಿಗತ ಅಂತರದ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಪಾಲಿಕೆ ಸೂಚಿಸಿದೆ. ಪ್ರವೇಶ ದ್ವಾರಗಳಲ್ಲಿ ಜನರ ದೈಹಿಕ ಉಷ್ಣಾಂಶಗಳನ್ನು ತಪಾಸಣೆ ನಡೆಸಲು ಸೂಚಿಸಲಾಗಿದೆ.

ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ಮೀಸಲು: ಖಾಸಗಿ ಆಸ್ಪತ್ರೆ ಮತ್ತು ನರ್ಸಿಂಗ್ ಹೋಮ್‌ಗಳಿಗೆ ಆಗಮಿಸುವ ಹೊರ ರೋಗಿಗಳಿಗೆ ಐಎಲ್‌ಐ ಹಾಗೂ ಸಾರಿ ಪರೀಕ್ಷೆ ಹಾಗೂ ಒಳರೋಗಿಗಳಿಗೆ ಕೋವಿಡ್ ಪರೀಕ್ಷೆ ನಡೆಸಲಾಗುತ್ತಿದೆ. ಕೇಂದ್ರ ಸರ್ಕಾರ ಈ ಹಿಂದೆ ನೀಡಿದ ಆದೇಶದಂತೆ ಖಾಸಗಿ ಆಸ್ಪತ್ರೆಗಳಲ್ಲಿ ಶೇ.10 ಹಾಸಿಗೆಯನ್ನು ಸೋಂಕಿತರ ಚಿಕಿತ್ಸೆಗೆ ಮೀಸಲಿಡಬೇಕು ಎಂದು ತಿಳಿಸಲಾಗಿದೆ. ಹಾಸಿಗೆ ಲಭ್ಯದ ಬಗ್ಗೆ ಪೋರ್ಟಲ್‌ನಲ್ಲಿ ದಾಖಲಿಸಲು ನಿರ್ದೇಶಿಸಲಾಗಿದೆ. ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು ಕೋವಿಡ್ ನಿಯಂತ್ರಣ ಕಾರ್ಯಕ್ಕೆ ಸಹಕಾರ ನೀಡಬೇಕು ಎಂದು ವಿನಂತಿಸಿಕೊಳ್ಳಲಾಗಿದ್ದು, ಬೂಸ್ಟರ್ ಡೋಸ್ ಹಾಗೂ ಮಕ್ಕಳ ವ್ಯಾಕ್ಸಿನೇಷನ್ ಬಗ್ಗೆ ಜಾಗೃತಿ ಮೂಡಿಸುತ್ತಿದ್ದೇವೆ ಎಂದು ಬಿಬಿಎಂಪಿ ಅಧಿಕಾರಿಗಳು ಹೇಳಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

02/05/2022 05:52 pm

Cinque Terre

1.1 K

Cinque Terre

0

ಸಂಬಂಧಿತ ಸುದ್ದಿ