ಬೆಂಗಳೂರು: ಆರೋಗ್ಯವಂತ ಮಕ್ಕಳು ದೇಶದ ಸಂಪತ್ತು. ಪೋಲಿಯೋ ಒಂದು ಭಯಾನಕ ರೋಗ, ಈ ರೋಗ ಮಕ್ಕಳಲ್ಲಿ ಶಾಶ್ವತ ಅಂಗವಿಕಲತೆಯನ್ನು ಉಂಟುಮಾಡುತ್ತದೆ. 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಈ ರೋಗವು ಹೆಚ್ಚಾಗಿ ಕಂಡುಬರುತ್ತದೆ. ಭಾರತದಲ್ಲಿ 2011 ರಿಂದ ಯಾವುದೇ ಪೋಲಿಯೋ ಪ್ರಕರಣಗಳು ವರದಿಯಾಗಿರುವುದಿಲ್ಲ. ವಿಶ್ವ ಆರೋಗ್ಯ ಸಂಸ್ಥೆ(WHO) ಭಾರತವನ್ನು ಪೋಲಿಯೋ ಮುಕ್ತ ರಾಷ್ಟ್ರ ಎಂದು ಘೋಷಿಸಿದೆ.
ಆದಾಗ್ಯೂ,ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಮಲಾವಿಯಲ್ಲಿ ಕೆಲವು ಪ್ರಕರಣಗಳು ವರದಿಯಾಗಿವೆ. ಈ ಹಿನ್ನೆಲೆಯಲ್ಲಿ ಈ ವರ್ಷ ಭಾರತ ಸರ್ಕಾರದ ಮಾರ್ಗದರ್ಶನದಂತೆ 27-02-2022 ರಿಂದ 02-03-2022 ರವರೆಗೆ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಯೋಜಿಸಲಾಗಿದೆ.
ರಾಷ್ಟ್ರೀಯ ಪಲ್ಸ್ ಪೋಲಿಯೋ-2022 ಕಾರ್ಯಕ್ರಮವನ್ನು ಬಿಬಿಎಂಪಿಯ ಸಾರ್ವಜನಿಕ ಆರೋಗ್ಯ ಇಲಾಖೆ ಅಡಿಯಲ್ಲಿ 141 ಯೋಜನಾ ಘಟಕಗಳ 198 ವಾರ್ಡ್ ಗಳಲ್ಲಿ ಲಸಿಕೆ ಹಾಕಲು ಯೋಜನೆ ರೂಪಿಸಿ, ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿರಲಾಗಿರುತ್ತದೆ. 0-5 ವರ್ಷಕ್ಕಿಂತ ಕಡಿಮೆ ವಯಸ್ಸಿನ 10,80,104 ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಗುರಿ ಹೊಂದಿದ್ದು, ಕೊಳೆಗೇರಿ ನಿವಾಸಿಗಳು ಮತ್ತು ವಲಸಿಗರ ಮೇಲೆ ವಿಶೇಷ ಗಮನ ನೀಡಲಾಗುವುದು.
ಬಿಬಿಎಂಪಿ ವ್ಯಾಪ್ತಿಯಲ್ಲಿ ಪಲ್ಸ್ ಪೋಲಿಯೋ ವಿವರ:
O - 5 ವರ್ಷದ ಮಕ್ಕಳ ಸಂಖ್ಯೆ: 10,80,104
ಬೂತ್ ಗಳ ಸಂಖ್ಯೆ: 3,404
ಸ್ಥಿರ ತಂಡಗಳು: 435
ಸಂಚಾರಿ ತಂಡಗಳು: 345
ಲಸಿಕಾ ಕಾರ್ಯಕರ್ತರು: 15,198
ಮೇಲ್ವಿಚಾರಕರು: 760
ನೋಡಲ್ ಅಧಿಕಾರಿಗಳು: 26
Kshetra Samachara
25/02/2022 01:11 pm