ಬೆಂಗಳೂರು: ಮಧ್ಯಮ ಹಾಗೂ ಕೆಳ ವರ್ಗದವರೇ ಹೆಚ್ಚಾಗಿ ನಂಬಿ ಚಿಕಿತ್ಸೆ ಪಡೆಯುತ್ತಿರುವ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ರೋಗಿಗಳು ಪರದಾಡ್ತಿರುವ ದೂರು ಕೇಳಿ ಬಂದಿದೆ. ಈ ಬಗ್ಗೆ ಸ್ವತಃ ಸಚಿವ ಸುಧಾಕರ್ ಅಸಮಾಧಾನ ಹೊರ ಹಾಕಿದ್ದಾರೆ. ವಿಕ್ಟೋರಿಯಾ, ಜಯದೇವ ಆಸ್ಪತ್ರೆಗಳಿಗೆ ಹೋಲಿಸಿದರೆ ಕೆ.ಸಿ.ಜನರಲ್ ಹಾಸ್ಪಿಟಲ್ ಇನ್ನೂ ಸುಧಾರಣೆ ಆಗಬೇಕೆಂದು ಸಚಿವರು ತಿಳಿಸಿದ್ದಾರೆ.
ಆದರೆ, ರೋಗಿಗಳ ಕುಂದುಕೊರತೆ ಆಲಿಸಲು ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಎದುರಾಗಿದೆ. ಕೋವಿಡ್ ಹೆಚ್ಚಿದ್ದ ಸಂದರ್ಭದಲ್ಲಿ ಗುತ್ತಿಗೆ ಆಧಾರದ ಮೇಲೆ ವೈದ್ಯರು ಹಾಗೂ ಸಿಬ್ಬಂದಿ ನೇಮಕ ಆಗ್ತಾಯಿತ್ತು. ಆದರೆ, ಮಾರ್ಚ್ ತಿಂಗಳಾಂತ್ಯದಲ್ಲಿ ಇವರನ್ನು ಸರ್ಕಾರ ಸೇವೆಯಿಂದ ಮುಕ್ತಿಗೊಳಿಸಿದೆ. ಇದೀಗ ರೋಗಿಗಳ ಸಂಖ್ಯೆ ಹೆಚ್ಚಾಗಿದ್ದು, ಡಾಕ್ಟರ್ಸ್- ನರ್ಸ್ ಗಳ ಕೊರತೆ ಇದೆ ಎಂದು ಆಸ್ಪತ್ರೆ ಅಧೀಕ್ಷಕ ಡಾ.ಬಿ.ಆರ್. ವೆಂಕಟೇಶಯ್ಯ ತಿಳಿಸಿದ್ದಾರೆ.
PublicNext
20/04/2022 09:06 pm