ಬೆಂಗಳೂರು; ನಗರದಲ್ಲಿ ಸೋಂಕು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಠಿಣ ಕ್ರಮಕ್ಕೆ ಮುಂದಾಗಿದ್ದೇವೆ. ಇಂದಿನಿಂದ ಲಸಿಕೆ ಪ್ರಮಾಣ ಪತ್ರ ಕಡ್ಡಾಯಗೊಳಿಸಲಾಗಿದೆ ಎಂದು ಪಾಲಿಕೆ ವಿಶೇಷ ಆಯುಕ್ತ ರಂಗಪ್ಪ ಹೇಳಿದರು.
ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪಾಲಿಕೆ ವಿಶೇಷ ಆಯುಕ್ತ ರಂಗಪ್ಪ, ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳದ ಹಿನ್ನೆಲೆಯಲ್ಲಿ ಮಾಲ್, ಚಿತ್ರಮಂದಿರ ಹಾಗೂ ರೈಲ್ವೆ ನಿಲ್ದಾಣ ಬಸ್ ನಿಲ್ದಾಣ ಸೇರಿದಂತೆ ಜನದಟ್ಟಣೆಯ ಕಡೆ ಮಾಸ್ಕ್ ಕಡ್ಡಾಯ ಮಾಡಲಾಗಿದೆ ಎಂದರು.
ಮಾಸ್ಕ್ ಕಡ್ಡಾಯದ ಜೊತೆ ಕೋವಿಡ್ ವ್ಯಾಕ್ಸಿನೇಷನ್ ಸರ್ಟಿಫಿಕೇಟ್ ಪರಿಶೀಲನೆ ಮಾಡಲು ಮಾರ್ಷಲ್‌ಗಳಿಗೆ ಸೂಚನೆ ನೀಡಲಾಗಿದೆ. ಜೊತೆಗೆ ಕೋವಿಡ್ ವ್ಯಾಕ್ಸಿನೇಷನ್ ಸರ್ಟಿಫಿಕೇಟ್ ಎಲ್ಲೆಡೆ ಕಡ್ಡಾಯ ಮಾಡಲಾಗಿದೆ ಎಂದು ತಿಳಿಸಿದರು.
Kshetra Samachara
09/06/2022 05:27 pm