ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಗುತ್ತಿಗೆ ಮಹಿಳಾ ನೌಕರರಿಗೂ ಮಾತೃತ್ವ ರಜೆ; ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದ ಇಲಾಖೆಗಳಲ್ಲಿ ಮತ್ತು ಅಂಗಸಂಸ್ಥೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಮಾತೃತ್ವ (ಹೆರಿಗೆ) ರಜೆ ಸೌಲಭ್ಯವನ್ನು ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ. ಇದುವರೆಗೆ ಸರ್ಕಾರಿ ನೌಕರಿಯಿದ್ದ ಮಹಿಳೆಯರಿಗೆ ಮಾತ್ರ ಹೆರಿಗೆ ರಜೆಯ ಸೌಲಭ್ಯವನ್ನು ನೀಡಲಾಗುತಿತ್ತು.

ಏಪ್ರಿಲ್ ತಿಂಗಳಿನಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ. ಮಾತೃತ್ವ ರಜೆಯನ್ನು ರಜೆಯ ಪ್ರಾರಂಭದ ದಿನಾಂಕದಿಂದ ಗರಿಷ್ಠ 180 ದಿನಗಳವರೆಗೆ ಮಂಜೂರು ಮಾಡಬಹುದಾಗಿದೆ.. ಗರ್ಭಸ್ರಾವ ಅಥವಾ ಗರ್ಭಪಾತದಿಂದ ಗರ್ಭಧಾರಣೆಯ ಪರ್ಯಾವಸಾನಗೊಂಡ ಸಂದರ್ಭದಲ್ಲಿ ಮಾತೃತ್ವ ರಜೆಯು 6 ವಾರಗಳನ್ನು ಮೀರಬಾರದು.. ಇಂತಹ ರಜೆಗಾಗಿ ಸಲ್ಲಿಸಿದ ಅರ್ಜಿಯು ನೋಂದಾಯಿತ ವೃತ್ತಿನಿರತ ವೈದ್ಯರಿಂದ ಪಡೆದ ಪ್ರಮಾಣ ಪತ್ರದಿಂದ ದೃಢೀಕರಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.. ಅಂತವೆರಿಗೆ ಸಂಬಂಳ ಕೊಡಬೇಕೆಂದು ಆದೇಶಿಸಿದೆ..

Edited By : PublicNext Desk
Kshetra Samachara

Kshetra Samachara

24/06/2022 07:57 pm

Cinque Terre

478

Cinque Terre

0

ಸಂಬಂಧಿತ ಸುದ್ದಿ