ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಆರೋಗ್ಯ ಸೌಧದಲ್ಲಿ ಮಾಸ್ಕ ಕಡ್ಡಾಯ, ತಪ್ಪಿದರೆ 250 ರೂ ದಂಡ

ಬೆಂಗಳೂರು: ರಾಜಧಾನಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೋವಿಡ್ 19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಸೌಧದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಭೇಟಿ ನೀಡುವ ಸಾರ್ವಜನಿಕರು ಸೇರಿದಂತೆ ಎಲ್ಲರೂ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರಾದ ಡಿ. ರಣದೀಪ್ ಸುತ್ತೋಲೆ ಹೊರಡಿಸಿದ್ದಾರೆ.

ಆರೋಗ್ಯ ಸೌಧದ ( ಅರೋಗ್ಯ ಇಲಾಖೆಯ ಕೇಂದ್ರ ಕಚೇರಿ) ಆವರಣ ಹಾಗೂ ಕಛೇರಿಯಲ್ಲಿ ಮಾಸ್ಕ್ ಧರಿಸದವರಿಗೆ ರೂ 250 ರೂಪಾಯಿ ದಂಡ ವಿಧಿಸಲಾಗುವುದು ಎಂದು ಉಲ್ಲೇಖಿಸಿದ್ದಾರೆ.

ಈ ನಿಯಮದ ಬಗ್ಗೆ ಆರೋಗ್ಯ ಸೌಧದ ಮುಖ್ಯ ಇಂಜಿನಿಯರ್ ಎಲ್ಲ ಹೌಸ್ ಕೀಪಿಂಗ್ ವಿಭಾಗದವರಿಗೆ ಮಾಹಿತಿ ನೀಡಿ ಕಡ್ಡಾಯ ಮಾಸ್ಕ್‌ ಧರಿಸುವ ನಿಯಮವನ್ನು ಎಲ್ಲರೂ ಪಾಲಿಸುವಂತೆ ಖಚಿತಪಡಿಸಿಕೊಳ್ಳಬೇಕು ಎಂದು ಸೂಚಿಸಿದ್ದಾರೆ.

Edited By : Nagaraj Tulugeri
PublicNext

PublicNext

12/08/2022 01:47 pm

Cinque Terre

9.63 K

Cinque Terre

0

ಸಂಬಂಧಿತ ಸುದ್ದಿ