ಬೆಂಗಳೂರು: ತನೈರಾ ಸಂಸ್ಥೆ ಇಂದು ಬೆಳಿಗ್ಗೆ ಮಲ್ಲೇಶ್ವರಂನಲ್ಲಿ 3 ಕಿ.ಮೀ. ದೂರದ ವರೆಗಿನ 'ಸೀರೆ ಉಟ್ಟ ನಾರಿಯರ ಓಟದ ಸ್ಪರ್ಧೆ' (ರನ್ ವಿತ್ ಸ್ಯಾರಿ) ಏರ್ಪಡಿಸಿತು. 18ನೇ ಅಡ್ಡರಸ್ತೆಯ ಮೈದಾನದಿಂದ ಆರಂಭವಾದ ಈ ಸ್ಪರ್ಧೆಯಲ್ಲಿ ಸಾವಿರಾರು ಮಹಿಳೆಯರು ಉತ್ಸಾಹದಿಂದ ಭಾಗವಹಿಸಿದರು.
ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿದರು. ಆರೋಗ್ಯದ ಗುಟ್ಟನ್ನು ಅರಿತರೆ ಬದುಕಿನ ಗುಟ್ಟನ್ನೇ ತಿಳಿಯಬಹುದು. ದೇಸೀ ಉಡುಪಿನಲ್ಲಿ ಕೂಡ ಮಹಿಳೆಯರು ಆಟೋಟಗಳಲ್ಲಿ ಭಾಗವಹಿಸಬಹುದು. ಇಂತಹ ಚಟುವಟಿಕೆಗಳಿಂದ ಮಹಿಳೆಯರಿಗೂ ಖುಷಿ ಸಿಗುತ್ತದೆ ಎಂದರು.
ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ದೈಹಿಕ ಶಿಕ್ಷಣ ಮತ್ತು ಯೋಗಕ್ಷೇಮಕ್ಕೂ ಆದ್ಯತೆ ಕೊಡಲಾಗಿದೆ. ಸದೃಢ ಆರೋಗ್ಯದಿಂದ ಸಶಕ್ತ ಭಾರತವನ್ನು ನಿರ್ಮಿಸಬಹುದು ಎಂದು ಹೇಳಿದರು. ಅದಮ್ಯ ಚೇತನ ಸಂಸ್ಥೆಯ ಮುಖ್ಯಸ್ಥೆ ಮತ್ತು ಬಿಜೆಪಿ ನಾಯಕಿ ತೇಜಸ್ವಿನಿ ಅನಂತಕುಮಾರ್ ಉಪಸ್ಥಿತರಿದ್ದರು.
PublicNext
18/09/2022 05:15 pm