ವರದಿ: ಶ್ರೀನಿವಾಸ್ ಚಂದ್ರ
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಕಡಿವಾಣಕ್ಕೆ ಸರ್ಕಾರ ಸನ್ನದ್ಧವಾಗಿದ್ದು, ಈಗಾಗಲೇ ನೈಟ್ ಕರ್ಫ್ಯೂ ಹಾಗೂ ವೀಕೆಂಡ್ ಕರ್ಫ್ಯೂ ಘೋಷಣೆ ಮಾಡಿದೆ.
ಈ ಹಿನ್ನೆಲೆ ಪೊಲೀಸರು ಮಹತ್ವದ ಸಭೆ ನಡೆಸಿದ್ದು, ಪಶ್ಚಿಮ ವಲಯ ಹೆಚ್ಚುವರಿ ಆಯುಕ್ತ ಸಂದೀಪ್ ಪಾಟೀಲ್ ಅವರ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಸಂಕ್ರಾಂತಿ ಹಬ್ಬದ ಸಮಯದಲ್ಲಿ ಹೆಚ್ಚಿನ ಜನರು ಸೇರುವ ಸಾಧ್ಯತೆ ಇದೆ. ಹೀಗಾಗಿ ಕೆ.ಆರ್ ಮಾರ್ಕೆಟ್, ಮೆಜೆಸ್ಟಿಕ್ ಸೇರಿದಂತೆ ಹಲವೆಡೆ ಹೇಗೆ ಕಂಟ್ರೋಲ್ ಮಾಡಬೇಕು ಎಂಬ ವಿಚಾರವಾಗಿ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.
ಈ ಸಭೆಯಲ್ಲಿ ಪಶ್ಚಿಮ ವಿಭಾಗ ಡಿಸಿಪಿ ಸಂಜೀವ್ ಪಾಟೀಲ್, ಕೇಂದ್ರ ವಿಭಾಗ ಡಿಸಿಪಿ ಅನುಚೇತ್, ದಕ್ಷಿಣ ವಿಭಾಗ ಡಿಸಿಪಿ ಹರೀಶ್ ಪಾಂಡೆ ಮತ್ತು ಉತ್ತರ ವಿಭಾಗ ಡಿಸಿಪಿ ವಿನಾಯಕ್ ಪಾಟೀಲ್ ಭಾಗಿಯಾಗಿದ್ದಾರೆ.
Kshetra Samachara
06/01/2022 03:32 pm