ಬೆಂಗಳೂರು: ರಾಜ್ಯ ಹಾಗೂ ದೇಶದಾದ್ಯಂತ ಕೊರೊನಾ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಉಲ್ಬಣಿಸುತ್ತಿವೆ.
ಇದರ ಹಿನ್ನೆಲೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ .ರಾಜ್ಯದಲ್ಲಿ 10 ದಿನಗಳ ಕಾಲ ನೈಟ್ ಕರ್ಫ್ಯೂ ಜತೆಗೆ 2 ವಾರಗಳ ಕಾಲ ವೀಕೆಂಡ್ ಕರ್ಫ್ಯೂ ಯನ್ನು ಜಾರಿಗೊಳಿಸಿದೆ. ಸರ್ಕಾರದ ಆದೇಶದಂತೆ ಬೆಂಗಳೂರಿನ ಪೊಲೀಸರು ನಗರದಾದ್ಯಂತ ಕಟ್ಟೆಚ್ಚರ ವಹಿಸಿದ್ದಾರೆ.ಕೆ ಆರ್ ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮೇಡಹಳ್ಳಿ ಕೆಳ ಸೇತುವೆ ಸಮೀಪ ಕೆಆರ್ ಪುರ ಪೋಲಿಸರು ಚೆಕ್ ಪೋಸ್ಟ್ ನಿರ್ಮಿಸಿ ಅನಗತ್ಯ ಓಡಾಡುತ್ತಿದ್ದ ವಾಹನಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಮೇಡಹಳ್ಳಿ ಕೆಳಸೇತುವೆ ಬಳಿ ಬಿಟ್ಟರೆ ವಿವಿಧ ಭಾಗದಲ್ಲಿ ಪೊಲೀಸರು ಕಾಣದೇ ಇರುವುದು ಪೊಲೀಸರ ಕಾರ್ಯವೈಖರಿ ಎಷ್ಟರ ಮಟ್ಟಿಗಿದೆ ಎಂದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.
Kshetra Samachara
08/01/2022 08:19 am