ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವೈಕುಂಠ ಏಕಾದಶಿ ಆಚರಣೆಗೆ ಕಠಿಣ ರೂಲ್ಸ್: 50% ಜನರಿಗೆ ಅವಕಾಶ?

ಬೆಂಗಳೂರು: ಬೆಂಗಳೂರು ನಗರದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಸಿಎಂ ನೇತೃತ್ವದಲ್ಲಿ ತಜ್ಞರ ಸಭೆ ನಡೆಯುತ್ತಿದೆ. ಈ ಸಭೆಯಲ್ಲಿ ಹಲವು ನಿಯಂತ್ರಣ ಕ್ರಮಗಳ ಕುರಿತಂತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜನರು ಕೋವಿಡ್ ನಿಯಂತ್ರಣಕ್ಕಾಗಿ ಕೊರೋನಾ ಮಾರ್ಗಸೂಚಿ ಅನುಸರಿಸಬೇಕು. ಮಾಸ್ಕ್, ಸಾಮಾಜಿಕ ಅಂತರ ಹಾಗೂ ವೀಕೆಂಡ್ ಕರ್ಪ್ಯೂ, ನೈಟ್ ಕರ್ಪ್ಯೂ ಕ್ರಮಗಳನ್ನು ಪಾಲಿಸಬೇಕು ಎಂದು ಗೌರವ್ ಗುಪ್ತ ತಿಳಿಸಿದ್ದಾರೆ.

ರಾಜ್ಯದಲ್ಲಿ ದಿನೇ ದಿನೇ ಏರಿಕೆಯಾಗುತ್ತಿರುವ ಕೊರೋನಾ ನಿಯಂತ್ರಣಕ್ಕಾಗಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ವರ್ಚುಯಲ್ ಸಭೆ ನಡೆದಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧೆಡೆ ಕೊರೊನಾ ನಿಯಂತ್ರಣಕ್ಕಾಗಿ ಲಾಕ್ ಡೌನ್ ನಂತಹ ಕಠಿಣ ನಿಯಮ ಜಾರಿಗೊಳಿಸುವ ನಿರ್ಧಾರ ಪ್ರಕಟಿಸಲಿದ್ದಾರೆ ಎನ್ನಲಾಗುತ್ತಿದೆ. ಇದೇ ಸಂದರ್ಭದಲ್ಲಿ ವೈಕುಂಠ ಏಕಾದಶಿಗೂ ಕೋವಿಡ್ ಕಠಿಣ ರೂಲ್ಸ್ ಜಾರಿಗೊಳಿಸುತ್ತಿರುವಂತ ಸರ್ಕಾರ, ಕೇವಲ 50 ಜನರಿಗೆ ಮಾತ್ರ ಶ್ರೀನಿವಾಸ ಸ್ವಾಮಿಯ ದರ್ಶನ ಪಡೆಯೋದಕ್ಕೆ ಅವಕಾಶ ನೀಡಲಿದೆ ಎಂಬ ಮಾಹಿತಿ ಇದೆ.

Edited By : Nagaraj Tulugeri
Kshetra Samachara

Kshetra Samachara

11/01/2022 07:59 pm

Cinque Terre

654

Cinque Terre

0

ಸಂಬಂಧಿತ ಸುದ್ದಿ