ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಕೊರೊನಾ ಏರಿಕೆ ಹಿನ್ನೆಲೆಯಲ್ಲಿ ಮಾಸ್ಕ್ ಕಡ್ಡಾಯ ಜತೆಗೆ ದಂಡ ವಿಧಿಸುವ ಪ್ರಕ್ರಿಯೆಗೆ ಪುನಃ ಚಾಲನೆ

ವರದಿ - ಗಣೇಶ್ ಹೆಗಡೆ

ಬೆಂಗಳೂರು: ಕೊರೊನಾ ಸೋಂಕಿನ ಪ್ರಕರಣ ಮತ್ತೆ ಏರಿಕೆ ಹಿನ್ನೆಲೆ ಮಾಸ್ಕ್ ಕಡ್ಡಾಯ ಜತೆಗೆ ದಂಡ ವಿಧಿಸುವ ಪ್ರಕ್ರಿಯೆಯನ್ನು ಪುನಃ ಆರಂಭಿಸಲು ಚಿಂತನೆ ನಡೆಸಲಾಗಿದೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ (ಆರೋಗ್ಯ) ಡಾ. ತ್ರಿಲೋಕಚಂದ್ರ ಹೇಳಿದರು.

ನಗರದಲ್ಲಿಂದು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸದ್ಯ ಬೆಂಗಳೂರಿನಲ್ಲಿ ಪ್ರತಿನಿತ್ಯ 17 ಸಾವಿರ ಪರೀಕ್ಷೆ ಮಾಡಲಾಗುತ್ತಿದೆ. ಇದರಿಂದ ಪ್ರತಿನಿತ್ಯ ಸರಾಸರಿ 600ರಿಂದ 700 ಪ್ರಕರಣಗಳು ಪತ್ತೆ ಆಗುತ್ತಿದೆ‌. ಇನ್ನೂ ಬಹುಕೇತ ಪ್ರಕರಣಗಳು ಗೃಹ ಆರೈಕೆಯಲ್ಲೇ ಸರಿ ಹೋಗುತ್ತಿವೆ ಎಂದರು.

ಕೇವಲ 60 ಪ್ರಕರಣಗಳು ಮಾತ್ರ ಖಾಸಗಿ ಆಸ್ಪತ್ರೆಗೆ ದಾಖಲಾಗಿದೆ.10 ಪ್ರಕರಣಗಳು ಮಾತ್ರ ಬೇರೆ ವಾರ್ಡ್‌ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು, ಪ್ರತಿನಿತ್ಯ ಜಿನೋಮಿಕ್ ಸೀಕ್ವೆನ್ಸ್ ಪ್ರಕ್ರಿಯೆ ನಡೆಯುತ್ತಿದೆ ಎಂದು ವಿವರಿಸಿದರು. ಮಾಸ್ಕ್ ಕಡ್ಡಾಯಕ್ಕೆ ನಿಯಮ ಹಾಗೂ ದಂಡ ಪ್ರಕ್ರಿಯೆ ವಾಪಸ್ ಬರುವ ಸಾಧ್ಯತೆಯಿದೆ ಎಂದ ಅವರು, ಮಹಾದೇವಪುರದಲ್ಲಿ ಲಸಿಕಾಕರಣ, ಬೂಸ್ಟರ್ ಡೋಸ್ ಬಗ್ಗೆ ಹೆಚ್ಚು ಅರಿವು ಮೂಡಿಸಲಾಗುತ್ತಿದೆ. ಖಾಸಗಿ ಕಚೇರಿಗಳಲ್ಲಿ ಕೋವಿಡ್ ನಿಯಮ ಪಾಲನೆ ಮಾಡಲು ಕ್ರಮ ವಹಿಸಲಾಗುತ್ತಿದೆ ಎಂದರು.

Edited By : Nagaraj Tulugeri
Kshetra Samachara

Kshetra Samachara

28/06/2022 02:23 pm

Cinque Terre

4.9 K

Cinque Terre

0

ಸಂಬಂಧಿತ ಸುದ್ದಿ