ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೊಮ್ಮಾಯಿ ಪರ ನಿಂತ ಕನ್ನಡ ಸಾಹಿತ್ಯ ಪರಿಷತ್ತಿನ ಅದ್ಯಕ್ಷ ನಾಡೋಜ ಜೋಶಿ..!

ಬೆಂಗಳೂರು: ಮುಖ್ಯಮಂತ್ರಿಗಳನ್ನು ಗೌರವಿಸದೇ, ಅವರನ್ನು ಅಪಹಾಸ್ಯ ಮಾಡುತ್ತಿರುವುದು ಖಂಡನಾರ್ಹವಾದುದ್ದು. ಯಾರು ಈ ಕುಕೃತ್ಯವನ್ನು ನಡೆಸುತ್ತಿದ್ದಾರೋ ಅವರ ಮನಸ್ಥಿತಿ ವಿಕೃತವಾಗಿದೆ ಎಂಬುದು ಇದನ್ನು ನೋಡಿದರೆ ತಿಳಿಯುತ್ತದೆ. ಇಂತಹ ವಿಕೃತ ಮನಸ್ಸಿನಿಂದ ಹೊರ ಬಂದು, ಸಮಾಜದಲ್ಲಿ ಸೌಜನ್ಯದಿಂದ, ಎಲ್ಲರನ್ನೂ, ಎಲ್ಲವನ್ನೂ ಗೌರವಿಸುವ ಮನೋಭಾವನೆಯನ್ನು ಹೊಂದಬೇಕು ಹಾಗೂ ಶ್ರಮ ವಹಿಸುವವರನ್ನು ಉತ್ತೇಜಿಸಿ, ಪ್ರೋತ್ಸಾಹಿಸುವ ಕೆಲಸವನ್ನು ಮಾಡಬೇಕು' - ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ತಿಳಿಸಿದ್ದಾರೆ.

ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಮೈಸೂರಿನಲ್ಲಿ ಮಂಗಳವಾರ ಜೂನ್ 21 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗವಹಿಸಿದ್ದರು. ಈ ವೇಳೆ ಸಿಎಂ ಅವರೂ ಕೂಡಾ ಮೈಸೂರು ಅರಮನೆ ಮೈದಾನದಲ್ಲಿ ಯೋಗಾಸನ ನಡೆಸಿದ್ದರು. ಬೊಮ್ಮಾಯಿ ಅವರ ಯೋಗಾಸನ ಭಂಗಿಗಳನ್ನು ಕೆಲವು ವಿಕೃತ ಮನಸ್ಸುಗಳು ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಮಾಡುವ ಮೂಲಕ ಅಪಹಾಸ್ಯ ಮಾಡುತ್ತಿದ್ದಾರೆ. ಇದನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ್ ಜೋಶಿ ಅವರು ತೀವ್ರವಾಗಿ ಖಂಡಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

23/06/2022 07:42 pm

Cinque Terre

1.1 K

Cinque Terre

0

ಸಂಬಂಧಿತ ಸುದ್ದಿ