ಬೆಂಗಳೂರು: ರಾಜ್ಯದಲ್ಲಿ ಮಂಕಿಪಾಕ್ಸ್ ಹರಡದಂತೆ ಅಗತ್ಯವಿರುವ ಮುನ್ನೆಚ್ಚರಿಕಾ ಕ್ರಮಗಳನ್ನ ವಹಿಸುವ ಹಿನ್ನಲೆ ಇಂದು ಅವರು ಮಂಕಿಪಾಕ್ಸ್ ಕುರಿತಂತೆ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿದ್ರು.
ಸಭೆಯಲ್ಲಿ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ನೀಡಿದ ಸೂಚನೆಗಳು.
1.ದೇಶದಲ್ಲಿ ಆರು ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗಿದ್ದು, ರಾಜ್ಯದ ವಿಮಾನನಿಲ್ದಾಣಗಳಲ್ಲಿ ಸೋಂಕಿತರ ಪರೀಕ್ಷೆಗೆ ಸೂಕ್ತ ಕ್ರಮ ವಹಿಸಬೇಕು.
2.ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಮಾರ್ಗಸೂಚಿಯಂತೆ ಸೋಂಕು ಧೃಢಪಟ್ಟ ವ್ಯಕ್ತಿಗಳನ್ನು 21 ದಿನಗಳ ಕ್ವಾರಂಟೈನ್ ಮಾಡುವುದು ಸೇರಿದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕೆಂದು ಮುಖ್ಯಮಂತ್ರಿಗಳು ಸೂಚಿಸಿದರು.
3. ಸೋಂಕಿಗೆ ಸಂಬಂಧಿಸಿದಂತೆ ಚಿಕಿತ್ಸೆ ನೀಡಬಹುದಾದ ಖಾಸಗಿ ಸಂಸ್ಥೆಗಳನ್ನು ಗುರುತಿಸಬೇಕು
4.ವೈದ್ಯಕೀಯ ಹಾಗೂ ಅರೆ ವೈದ್ಯಕೀಯ ಸಿಬ್ಬಂದಿಗೆ ಸೂಕ್ತ ತರಬೇತಿ ನೀಡುವಂತೆ ಸೂಚಿಸಿದರು.
5. ಮಂಕಿಪಾಕ್ಸ್ ಸೋಂಕಿನ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ವ್ಯಾಪಕವಾಗಿ ಪ್ರಚಾರ ಕಾರ್ಯ ಕೈಗೊಳ್ಳುವುದು.
ರಾಜ್ಯದ ಮೂವರು ವ್ಯಕ್ತಿಗಳ ಪೈಕಿ ಇಬ್ಬರು ವ್ಯಕ್ತಿಗಳ ಪರೀಕ್ಷಾ ವರದಿ ನೆಗೆಟಿವ್ ಇದೆ. ಬೆಲ್ಜಿಯಂ ನಿಂದ ಪ್ರಯಾಣ ಮಾಡಿದ್ದ ಉತ್ತರ ಕನ್ನಡ ಜಿಲ್ಲೆಯ ವ್ಯಕ್ತಿಯ ಪರೀಕ್ಷಾ ವರದಿ ಇನ್ನೂ ಬರಬೇಕಿದೆ. ಬೆಂಗಳೂರಿನ ಇಡಿ ಆಸ್ಪತ್ರೆ ಹಾಗೂ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯನ್ನು ಕ್ವಾರಂಟೈನ್ ಗಾಗಿ ಗುರುತಿಸಲಾಗಿದೆ ಎಂದು ಅಧಿಕಾರಿಗಳು ಸಿಎಂ ಗೆ ಮಾಹಿತಿ ನೀಡಿದ್ದಾರೆ.
Kshetra Samachara
02/08/2022 09:28 pm