ಬೆಂಗಳೂರು: 18 ವರ್ಷ ಮೇಲ್ಪಟ್ಟವರ ಪೈಕಿ ಕೋವಿಶೀಲ್ಡ್ ಅಥವಾ ಕೋವ್ಯಾಕ್ಸಿನ್ ಲಸಿಕೆಯ ಎರಡು ಡೋಸ್‌ಗಳನ್ನೂ ಪಡೆದುಕೊಂಡಿರುವವರಿಗೆ ಮುನ್ನೆಚ್ಚರಿಕೆ ಡೋಸ್ ಆಗಿ ಕೋರ್ಬೆವ್ಯಾಕ್ಸ್ ನೀಡಲು ಕೇಂದ್ರ ಅನುಮೋದನೆ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೋವಿಡ್ ವಿರುದ್ಧದ ಪ್ರಾಥಮಿಕ ಲಸಿಕೆಗಿಂತ ವಿಭಿನ್ನವಾದ ಬೂಸ್ಟರ್ ಡೋಸ್ ಅನ್ನು ದೇಶದಲ್ಲಿ ಮೊದಲ ಬಾರಿಗೆ ಅನುಮತಿಸಲಾಗಿದೆ.
ಕೋವಿಡ್ 19 ಕುರಿತ ರಾಷ್ಟ್ರೀಯ ತಾಂತ್ರಿಕ ಸಲಹಾ ಸಮಿತಿಯು (ಎನ್‌ಟಿಎಜಿಐ) ಕೋರ್ಬೆವ್ಯಾಕ್ಸ್ ಲಸಿಕೆಯನ್ನು ಮುನ್ನೆಚ್ಚರಿಕೆ ಡೋಸ್ ಆಗಿ ನೀಡಲು ಶಿಫಾರಸು ಮಾಡಿತ್ತು. ಇದರ ಆಧಾರದಲ್ಲಿ ಆರೋಗ್ಯ ಸಚಿವಾಲಯ ಅನುಮತಿ ನೀಡಿದೆ ಎಂದು ಮೂಲಗಳು ಸುದ್ದಿಸಂಸ್ಥೆಗೆ ತಿಳಿಸಿವೆ.
Kshetra Samachara
10/08/2022 08:23 pm