ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದೊಡ್ಡಬಳ್ಳಾಪುರ: 2025ರ ವೇಳೆಗೆ ಕ್ಷಯಮುಕ್ತ ಜಿಲ್ಲೆಯನ್ನಾಗಿಸಲು ವಿವಿಧ ಕಾರ್ಯಕ್ರಮಗಳು

ದೊಡ್ಡಬಳ್ಳಾಪುರ : 2025ರ ವೇಳೆಗೆ ಜಿಲ್ಲೆಯನ್ನು ಕ್ಷಯಮುಕ್ತವನ್ನಾಗಿಸಲು ವಿವಿಧ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದ್ದು, ಕ್ಷಯರೋಗದ ನಿಯಂತ್ರಣಕ್ಕಾಗಿ ಜಿಲ್ಲೆಯು ಕಂಚಿನ ಪದಕ ಪಡೆದಿದೆ. ಮುಂದಿನ ದಿನಗಳಲ್ಲಿ ಚಿನ್ನದ ಪದಕ ಪಡೆಯುವ ಗುರಿ ಹೊಂದಲಾಗಿದ್ದು, ಕ್ಷಯ ರೋಗ ನಿರ್ಮೂಲನೆಗೆ ಆರೋಗ್ಯ ಇಲಾಖೆಯೊಂದಿಗೆ ಸಮುದಾಯದ ಸಹಕಾರ ಅತ್ಯಗತ್ಯವಾಗಿದೆ ಎಂದು ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ನಾಗೇಶ್ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಕ್ಷಯರೋಗ ನಿರ್ಮೂಲನಾ ಘಟಕ ಹಾಗೂ ಆರೋಗ್ಯ ಇಲಾಖೆ, ಡಾಕ್ಟರ್ಸ್ ಫಾರ್ ಯು ಮತ್ತು ಕ್ರಿಪ್ಟೋ ರಿಲೀಫ್ ಸಹಯೋಗದೊಂದಿಗೆ ನಗರದ ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದ ವಿಶ್ವ ಕ್ಷಯರೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಕ್ಷಯ ರೋಗವು ಗಾಳಿಯಲ್ಲಿ ಬಹುಬೇಗ ಹರಡುವ ಕಾಯಿಲೆಯಾಗಿದ್ದು, ಎರಡು ವಾರ ಅಥವಾ ಅದಕ್ಕಿಂತ ಮೇಲ್ಪಟ್ಟು ಸತತ ಕೆಮ್ಮು, ಸಂಜೆ ವೇಳೆ ಜ್ವರ ಹೆಚ್ಚಳ, ರಾತ್ರಿ ವೇಳೆ ಬೆವರುವುದು, ತೂಕ ಕಡಿಮೆಯಾಗುವುದು, ಮೈ ನಡುಕ, ಕೆಮ್ಮಿದಾಗ ಕಫದಲ್ಲಿ ರಕ್ತ ಬೀಳುವುದು. ಪ್ರಮುಖ ಲಕ್ಷಣಗಳಾಗಿವೆ. ಕ್ಷಯರೋಗ ಪರೀಕ್ಷೆ ಹಾಗೂ ಚಿಕಿತ್ಸೆ ಉಚಿತವಾಗಿ ದೊರೆಯುತ್ತದೆ. ಸರ್ಕಾರದಿಂದ ಉಚಿತ ಔಷಧಿ ಮತ್ತು ನಿಕ್ಷೆಯ ಪೋಷಣ ಯೋಜನೆ ಅಡಿಯಲ್ಲಿ ಮಾಸಿಕ 500 ರೂಗಳು ಕ್ಷಯ ರೋಗಿಗಳ ಖಾತೆಗೆ ನೇರ ಸಂದಾಯವಾಗುತ್ತಿದೆ. ಕ್ಷಯರೋಗದ ಲಕ್ಷಣವಿರುವವರನ್ನು ಸಮೀಪದ ಆರೋಗ್ಯಕೇಂದ್ರಕ್ಕೆ ಹೋಗಲು ಶಿಫಾರಸ್ಸು ಮಾಡಬೇಕು. ವೈದ್ಯರು ಹೇಳುವವರೆಗೆ ಸಂಪೂರ್ಣ ಚಿಕಿತ್ಸೆ ಪಡೆದರೆ ಮಾತ್ರ ಕ್ಷಯ ರೋಗ ಸಂಪೂರ್ಣ ಗುಣಮುಖವಾಗಲು ಸಾಧ್ಯ ಎಂದರು.

Edited By : PublicNext Desk
Kshetra Samachara

Kshetra Samachara

25/03/2022 08:36 pm

Cinque Terre

2.28 K

Cinque Terre

0

ಸಂಬಂಧಿತ ಸುದ್ದಿ