ರಿಪೋರ್ಟ್- ರಂಜಿತಾಸುನಿಲ್
ಬೆಂಗಳೂರು: ಪ್ರವಾಹ ಪೀಡಿತ ಅಥವಾ ಭಾರಿ ಮಳೆಯಾಗುತ್ತಿರುವ ಜಿಲ್ಲೆಗಳಲ್ಲಿ ಆರೋಗ್ಯ ತುರ್ತು ಪರಿಸ್ಥಿತಿಯನ್ನು ನಿಭಾಯಿಸಲು ಜಿಲ್ಲಾ ಹಾಗೂ ತಾಲೂಕು ಮಟ್ಟದ ರಾಪಿಡ್ ರೆಸ್ಪಾನ್ಸ್ ಟೀಮ್‌ಗಳು ಯಾವಾಗಲೂ ಸಿದ್ಧವಾಗಿರಬೇಕು ಎಂದು ಸೂಚಿಸಲಾಗಿದೆ. ಈ ತಂಡಗಳಿಗೆ ಅಗತ್ಯ ಪರಿಕರ, ಸಾಧನ, ಸಾರಿಗೆ ಸೌಲಭ್ಯವನ್ನು ನೀಡಿ ಜನರ ಆರೋಗ್ಯ ರಕ್ಷಣೆಗೆ ತುರ್ತಾಗಿ ಧಾವಿಸುವಂತೆ ವ್ಯವಸ್ಥೆ ಮಾಡಬೇಕು. ಹಳ್ಳಿ ಹಾಗೂ ವಾರ್ಡ್ ಮಟ್ಟದಲ್ಲೂ ಪರಿಸ್ಥಿತಿಯನ್ನು ನಿರ್ವಹಿಸಲು ಸಜ್ಜಾಗಿರಬೇಕು ಎಂದು ಸೂಚಿಸಲಾಗಿದೆ' - ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್.
ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಪ್ರತಿ ಜಿಲ್ಲೆಗಳಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ರೋಗ ನಿಯಂತ್ರಣ ಮಾಡಬೇಕು ಎಂದು ಸೂಚಿಸಿದ್ದಾರೆ. ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಹಲವು ಜಿಲ್ಲೆಗಳಲ್ಲಿ ಪ್ರವಾಹದ ಪರಿಸ್ಥಿತಿ ಸೃಷ್ಟಿಯಾಗಿದೆ. ಇದರಿಂದಾಗಿ ಮಲೇರಿಯಾ, ಡೆಂಗ್ಯೂ, ಚಿಕೂನ್‌ಗುನ್ಯಾ, ಜಪಾನೀಸ್ ಎನ್ಸಫಲೈಟಿಸ್, ಆನೆಕಾಲು ಮೊದಲಾದ ರೋಗಗಳು ಹರಡುವ ತೀವ್ರ ಸಾಧ್ಯತೆ ಇದೆ. ಇದಕ್ಕಾಗಿ ಪ್ರತಿ ಜಿಲ್ಲಾಡಳಿತವು ಆರೋಗ್ಯ ಇಲಾಖೆಯ ಸಮನ್ವಯದೊಂದಿಗೆ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕೆಂದು ಸೂಚನೆ ನೀಡಲಾಗಿದೆ.
ಪ್ರವಾಹ ಪೀಡಿತ ಅಥವಾ ಭಾರಿ ಮಳೆಯಾಗುತ್ತಿರುವ ಜಿಲ್ಲೆಗಳಲ್ಲಿ ಆರೋಗ್ಯ ತುರ್ತು ಪರಿಸ್ಥಿತಿಯನ್ನು ನಿಭಾಯಿಸಲು ಜಿಲ್ಲಾ ಹಾಗೂ ತಾಲೂಕು ಮಟ್ಟದ ರಾಪಿಡ್ ರೆಸ್ಪಾನ್ಸ್ ಟೀಮ್‌ಗಳು ಯಾವಾಗಲೂ ಸಿದ್ಧವಾಗಿರಬೇಕು ಎಂದು ಸೂಚಿಸಲಾಗಿದೆ. ಈ ತಂಡಗಳಿಗೆ ಅಗತ್ಯ ಪರಿಕರ, ಸಾಧನ, ಸಾರಿಗೆ ಸೌಲಭ್ಯವನ್ನು ನೀಡಿ ಜನರ ಆರೋಗ್ಯ ರಕ್ಷಣೆಗೆ ತುರ್ತಾಗಿ ಧಾವಿಸುವಂತೆ ವ್ಯವಸ್ಥೆ ಮಾಡಬೇಕು. ಹಳ್ಳಿ ಹಾಗೂ ವಾರ್ಡ್ ಮಟ್ಟದಲ್ಲೂ ಪರಿಸ್ಥಿತಿಯನ್ನು ನಿರ್ವಹಿಸಲು ಸಜ್ಜಾಗಿರಬೇಕು ಎಂದು ಸೂಚಿಸಲಾಗಿದೆ.
Kshetra Samachara
15/07/2022 01:39 pm