ಬೆಂಗಳೂರು: ರೂಪಾಂತರಿ ವೈರಾಣುಗಳ ಬಗ್ಗೆ ನಿಗಾ ವಹಿಸಲು ಕೈಗೊಳ್ಳಲಾಗುವ ಜಿನೋಮ್ ಸೀಕ್ವೆನ್ಸಿಂಗ್ ಪರೀಕ್ಷೆ ಮಾಡಲು ಕೇಂದ್ರದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯವು ಬೆಂಗಳೂರಿನ 4 ಖಾಸಗಿ ಲ್ಯಾಬ್‌ಗಳಿಗೆ ಅನುಮತಿ ನೀಡಿದೆ.
ಜಿನೋಟೈಪಿಕ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್, ಸ್ಟ್ರಾಂಡ್ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್, ಮೆಡ್ಜೆನೋಮ್ ಮತ್ತು ಯೂರೋಫಿನ್ಸ್ ಜಿನೋಮಿಕ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ಗೆ ಜೀನೋಮ್ ಸೀಕ್ವೆನ್ಸಿಂಗ್ ಪರೀಕ್ಷೆ ನಡೆಸಲು ಅನುಮತಿಸಲಾಗಿದೆ.
ಜೀನೋಮ್ ಸೀಕ್ವೆನ್ಸಿಂಗ್ ಪರೀಕ್ಷೆ ನಡೆಸಲು ಪ್ರಯೋಗಾಲಯಗಳಿಗೆ ಅಗತ್ಯ ಅನುದಾನದ ಅಗತ್ಯವಿದೆ. ಜೀನೋಮ್ ಸೀಕ್ವೆನ್ಸಿಂಗ್ ಲ್ಯಾಬೊರೇಟರಿ INSACOG ಮೂಲಕ ಮಾದರಿಗಳನ್ನು ರವಾನಿಸಲಾಗುತ್ತದೆ ಎಂದು ಜೈವಿಕ ತಂತ್ರಜ್ಞಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
PublicNext
24/02/2022 06:38 pm