ಬೊಮ್ಮನಹಳ್ಳಿ:ಇಂದು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಬಿಎಂಪಿ ವಲಯ ಕಛೇರಿಯಲ್ಲಿ ಇಲಾಖಾವಾರು ಅಧಿಕಾರಿಗಳ ಮಾಸಿಕ ಪ್ರಗತಿ ಸಭೆ ಹಾಗೂ ಮಳೆಯಿಂದಾಗಿ ಹಾನಿಗೊಳಗಾಗುವ ಪ್ರದೇಶದಲ್ಲಿ ವಿಶೇಷವಾಗಿ ಗಮನಹರಿಸುವಂತೆ ಅಧಿಕಾರಿಗಳಿಗೆ ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಸೂಚನೆಯನ್ನು ನೀಡಿದರು
ಇತ್ತೀಚಿಗೆ ಸುರಿದ ಧಾರಕಾರ ಮಳೆಯಿಂದಾಗಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಸುತ್ತಮುತ್ತಲಿನ ಪ್ರದೇಶದಲ್ಲಿ ಮನೆಗಳಿಗೆ ನೀರು ನುಗ್ಗಿ ಅವಾಂತರವನ್ನ ಸೃಷ್ಟಿ ಮಾಡಿತ್ತು ಹೀಗಾಗಿ ಅವಶ್ಯವಿರುವ ಮುಂಜಾಗ್ರತಾ ಕ್ರಮಗಳನ್ನು ಶೀಘ್ರವಾಗಿ ಜಾರಿಗೊಳಿಸುವಂತೆ ಕಟ್ಟುನಿಟ್ಟಾಗಿ ತಿಳಿಸಲಾಯಿತು. ಇನ್ನು ಈ ಸಭೆಯಲ್ಲಿ ಪ್ರಮುಖವಾಗಿ ಮಳೆ ಯಿಂದಾಗುವ ಅನಾನುಕೂಲ ಮತ್ತು ಕಾಮಗಾರಿಗಳನ್ನು ಅತಿ ಶೀಘ್ರವಾಗಿ ಮುಗಿಸುವಂತೆ ಸೂಚನೆ ನೀಡಲಾಯಿತು ಅಲ್ಲದೆ ಬಿಬಿಎಂಪಿ, ಬಿಡಬ್ಲ್ಯೂಎಸ್‌ಎಸ್‌ಬಿ ಎಸ್ ಎಸ್ ಡಬ್ಲ್ಯೂ ಡಿ ,ಬೆಸ್ಕಾಂ
ಪೋಲಿಸ್ ಇಲಾಖೆ,ಅರಣ್ಯ ಇಲಾಖೆ ಆರೋಗ್ಯ ಇಲಾಖೆ ಮತ್ತು ಮುಂತಾದ ಸಿಬ್ಬಂದಿ ಅಧಿಕಾರಿಗಳು ನೀಡಿದ ವರದಿಯನ್ನು ಸಹ ಪರಿಶೀಲನೆ ನಡೆಸಲಾಯಿತು ಈ ಸಂದರ್ಭದಲ್ಲಿ ಜಂಟಿ ಆಯುಕ್ತರಾದ ಕೃಷ್ಣಮೂರ್ತಿ ಅವರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
03/09/2022 09:11 pm