ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಮನೆ-ಮನೆಗೆ ಕೋವಿಡ್ ಲಸಿಕೆ; ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಚಾಲನೆ

ವರದಿ: ಗಣೇಶ್ ಹೆಗಡೆ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೇರ್ ಇಂಡಿಯಾ ಸಹಯೋಗದಲ್ಲಿ 80 ಲಸಿಕಾ ದ್ವಿಚಕ್ರ ವಾಹನ ಹಾಗೂ 16 ಮೊಬೈಲ್(4 ಚಕ್ರ ವಾಹನ) "ಲಸಿಕೆ ವಾಹನ"ಗಳಿಗೆ ಇಂದು ಮುಖ್ಯ ಆಯುಕ್ತ ಗೌರವ್ ಗುಪ್ತ ಚಾಲನೆ ನೀಡಿದರು.

ಪ್ರತಿ ವಲಯಕ್ಕೆ 8 ದ್ವಿಚಕ್ರ ವಾಹನ ಹಾಗೂ 2 ಮೊಬೈಲ್(4 ಚಕ್ರ ವಾಹನ) ಸಹಿತ ಒಟ್ಟು 80 ದ್ವಿಚಕ್ರ ವಾಹನ ಹಾಗೂ 16 ಮೊಬೈಲ್(4 ಚಕ್ರ) ವಾಹನಗಳು ಬ್ಲಾಕ್ ಮತ್ತು ಲೇನ್ ಮಟ್ಟದಲ್ಲಿ ಲಸಿಕೆ ನೀಡಲು ಹೋಗುವ ಆರೋಗ್ಯ ಸಿಬ್ಬಂದಿ ಜೊತೆ ಕಾರ್ಯ ನಿರ್ವಹಿಸಲಿದೆ.

ಪಾಲಿಕೆ ವ್ಯಾಪ್ತಿಯ ಎಲ್ಲ ಪ್ರಾ.ಆ. ಕೇಂದ್ರಗಳಲ್ಲಿ ಲಸಿಕೆ ನೀಡಲಾಗುತ್ತಿದೆ ಹಾಗೂ ಯಲಹಂಕದ ಡಾ. ಬಿ.ಆರ್.ಅಂಬೇಡ್ಕರ್ ಭವನ ಹಾಗೂ ಮಲ್ಲೇಶ್ವರದ ಯಂಗ್‌ಸ್ಟರ್ಸ್ ಕಬಡ್ಡಿ ಮೈದಾನದಲ್ಲಿನ ಬೃಹತ್ ಲಸಿಕಾ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುತ್ತಿದ್ದು, ವಾಕ್ ಇನ್ ಹಾಗೂ ಡ್ರೈವ್ ಇನ್ ಮೂಲಕ ವಾಹನಗಳಲ್ಲೇ ಲಸಿಕೆ ಪಡೆಯುವ ವ್ಯವಸ್ಥೆ ಮಾಡಲಾಗಿದೆ.

ಕಳೆದ 10 ದಿನಗಳಿಂದ ಪಾಲಿಕೆಯ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ, ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ಆರೋಗ್ಯ ಸಿಬ್ಬಂದಿ ವಾರ್ಡ್ ನ ಮನೆ-ಮನೆಗೆ ಭೇಟಿ ನೀಡಿ ಲಸಿಕೆ ಪಡೆಯದವರಿಗೆ ಲಸಿಕೆ ನೀಡುವ ಕಾರ್ಯ ನಡೆಯುತ್ತಿದೆ. ಮತದಾರರ ಪಟ್ಟಿ ಅನುಸಾರ ಮನೆಯಲ್ಲಿ 18 ವರ್ಷ ಮೇಲ್ಪಟ್ಟವರು ಲಸಿಕೆ ಪಡೆದಿದ್ದಾರೆಯೇ ಎಂಬುದನ್ನು ಖಾತರಿಪಡಿಸಿ ಲಸಿಕೆ ನೀಡಲಾಗುತ್ತಿದೆ.

ಈ ವೇಳೆ ವಿಶೇಷ ಆಯುಕ್ತ(ಆರೋಗ್ಯ) ಡಾ. ತ್ರಿಲೋಕ್ ಚಂದ್ರ, ಮುಖ್ಯ ಆರೋಗ್ಯಾಧಿಕಾರಿ ಡಾ. ಬಾಲಸುಂದರ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Edited By : Shivu K
Kshetra Samachara

Kshetra Samachara

25/11/2021 10:41 am

Cinque Terre

364

Cinque Terre

0

ಸಂಬಂಧಿತ ಸುದ್ದಿ