ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಲಯನ್ಸ್ ರಕ್ತನಿಧಿ ಕೇಂದ್ರ ಹಾಗೂ ದೇವನಹಳ್ಳಿ ಸಾರ್ವಜನಿಕ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ರಕ್ತಧಾನ ಶಿಬಿರ ಏರ್ಪಡಿಸಲಾಗಿತ್ತು.
ಇಂದು ದೇವನಹಳ್ಳಿ ಸಾರ್ವಜನಿಕ ಆಸ್ಪತ್ರೆಲಿ ಏರ್ಪಡಿಸದ್ದ ಸ್ವಯಂಪ್ರೇರಿತ ರಕ್ತದಾನ ಶಿಬಿರದಲ್ಲಿ ನೂರಾರು ಜನ ಬಿಎಸ್ಎಫ್ ಯೋಧರು ರಕ್ತದಾನ ಮಾಡಿದರು. ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಪ್ಪೇಸ್ವಾಮಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಶ್ರೀನಿವಾಸ್, ವೈದ್ಯರು, ಆಸ್ಪತ್ರೆ ಸಿಬ್ಬಂದಿ ಉಪಸ್ಥಿತರಿದ್ದರು. ಬಿಎಸ್ಎಫ್ ಯೋಧರು ಸ್ವಯಂಪ್ರೇರಿತ ರಾಗಿ ರಕ್ತದಾನ ಶಿಬಿರದಲ್ಲಿ ಭಸಗವಹಿಸಿ ಇತರ ಜನಸಾಮಾನ್ಯರಿಗೆ ಮಾದರಿಯಾದರು..
Kshetra Samachara
27/02/2022 05:24 pm