ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತದ ವತಿಯಿಂದ ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಆರೋಗ್ಯ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ದೇವನಹಳ್ಳಿಯ ಆಸ್ಪತ್ರೆ ಆವರಣದಲ್ಲಿ ಬೃಹತ್ ಆರೋಗ್ಯ ಮೇಳ ನಡೆಯಿತು. ಕೇಂದ್ರ ಸರ್ಕಾರದ ನಿರ್ದೇಶನದಂತೆ ಉಚಿತ ಆರೋಗ್ಯ ಮೇಳವನ್ನು ಜಿಲ್ಲೆಯಲ್ಲಿ ಮೊದಲ ಬಾರಿಗೆ ನಡೆಸಲಾಯಿತು. ಆರೋಗ್ಯ ಮೇಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಆಗಮಿಸಿದ್ದರು.
ಜಿಲ್ಲಾಧಿಕಾರಿ ಶ್ರೀನಿವಾಸ್, DHO ತಿಪ್ಪೇಸ್ವಾಮಿ, CEO ರೇವಣಪ್ಪ, E.O. ವಸಂತ್ ಕುಮಾರ್, ತಹಶೀಲ್ದಾರ್ ಶಿವರಾಜ್, THO ಸಂಜಯ್ ಆರೋಗ್ಯ ಮೇಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದೇ ವೇಳೆ ಜಿಲ್ಲಾಧಿಕಾರಿ ಶ್ರೀನಿವಾಸ್ ರವರು ಮಾತನಾಡಿ, ಆರೋಗ್ಯ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಉತ್ತಮ ಕೆಲಸ ಮಾಡಿದೆ. ಆರೋಗ್ಯ ಇಲಾಖೆ ಕೊರೊನಾ ವೇಳೆ ಉತ್ತಮ ಕೆಲಸ ನಿರ್ವಹಿಸಿದೆ. ನೂರರಷ್ಟು ಕೊರೊನಾ ಲಸಿಕೆ ಹಾಕಲಾಗಿದೆ ಎಂದು ಹೇಳಿದರು.
ಸರ್ಕಾರದ ಹಲವು ಯೋಜನೆ ಮೂಲಕ ಐವತ್ತು ಲಕ್ಷದವರೆಗೂ ಉಚಿತವಾಗಿ ಚಿಕಿತ್ಸೆ ಪಡೆಯಬಹುದು. ಎಬಿಎಆರ್ ಕೆ ಕಾರ್ಡ್ ಮೂಲಕ ಒಂದು ಕುಟುಂಬ ಇಂದಿನ ಆರೋಗ್ಯ ಮೇಳಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಏನೇ ಸಮಸ್ಯೆ ಇದ್ದರೂ ಪ್ರಾಥಮಿಕ ಹಂತದಲ್ಲಿ ತಪಾಸಣೆ ಮಾಡಿಸಿಕೊಳ್ಳಿ. ನಮ್ಮದು ಕೊರೊನಾ ಮುಕ್ತ ಜಿಲ್ಲೆಯಾಗಿದೆ ಎಂದು ತಿಳಿಸಿದರು.
ಇದೇ ವೇಳೆ ಶಾಸಕ ನಿಸರ್ಗ ನಾರಾಯಣಸ್ವಾಮಿ ಮಾತನಾಡಿ ಎಲ್ಲಾ ಜನರಿಗೂ ಕೊರೊನಾ ಬರುತ್ತಿದೆ. ನಮ್ಮ ಜಿಲ್ಲೆಯ ಆರೋಗ್ಯ ಇಲಾಖೆ ಉತ್ತಮ ರೀತಿ ನಿರ್ವಹಿಸಿದೆ. ಆರೋಗ್ಯ ಮೇಳ ತಾಲೂಕು ಮಟ್ಟದ ಬದಲಿಗೆ ಹೋಬಳಿ ಮಟ್ಟದಲ್ಲಿ ನಡೆಯಬೇಕು ಎಂದರು.
ದೇವನಹಳ್ಳಿ ತಾಲೂಕಿನ ಆಸ್ಪತ್ರೆಯನ್ನ ಜಿಲ್ಲಾ ಆರೋಗ್ಯ ಕೇಂದ್ರವನ್ನಾಗಿ ಮಾಡುವಂತೆ ಜಿಲ್ಲಾ ಉಸ್ತುವಾರಿ & ಆರೋಗ್ಯ ಸಚಿವ ಸುಧಾಕರ್ ರವರಿಗೆ ಮನವಿ ಮಾಡಲಾಗಿದೆ.
ಜಿಲ್ಲಾಡಳಿತದ ವತಿಯಿಂದ ನಡೆದ ಆರೋಗ್ಯ ಮೇಳದಲ್ಲಿ ಸಾವಿರಾರು ಜನರ ಭಾಗವಹಿಸಿ ತಪಾಸಣೆ ಮಾಡಿಸಿಕೊಂಡರು. ಉತ್ತಮ ಚಿಕಿತ್ಸೆ ಪಡೆಯೊ ಮೂಲಕ ಆರೋಗ್ಯ ಮೇಳವನ್ನು ಯಶಸ್ವಿಗೊಳಿಸಿದರು.
SureshBabu Public Next ದೇವನಹಳ್ಳಿ..
Kshetra Samachara
19/04/2022 11:45 am