ಬೆಂಗಳೂರು: ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಜ್ಞರ ಜತೆ ಚರ್ಚಿಸಿದ ಬಳಿಕ ಡಾ. ಸುಧಾಕರ್ ಇಂದು ಮುಖ್ಯಮಂತ್ರಿಗಳ ನಿವಾಸದಲ್ಲಿ ನಡೆಯಲಿರುವ ಕೋವಿಡ್ ಕುರಿತ ವಿಶೇಷ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇದಕ್ಕೂ ಮುನ್ನ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಸಚಿವ ಡಾ. ಕೆ. ಸುಧಾಕರ್, 'ಕೋವಿಡ್ ನಾಲ್ಕನೇ ಅಲೆ ಬಂದರೂ ಅದನ್ನು ಸಮರ್ಥವಾಗಿ ನಿರ್ವಹಣೆ ಮಾಡುವ ಶಕ್ತಿ ನಮಗಿದೆ' ಎಂದು ತಿಳಿಸಿದ್ದಾರೆ.
ಜನರು ಮಾಸ್ಕ್ ಹಾಕುತ್ತಿಲ್ಲ. ಕೋವಿಡ್ ಹೊರಟು ಹೋಗಿದೆ ಅಂತ ಇದ್ದಾರೆ. ಆದ್ರೆ ಜನರು ಕಡ್ಡಾಯವಾಗಿ ಮಾಸ್ಕ್ ಹಾಕಬೇಕು. ಅನೇಕ ಜನರು ಲಸಿಕೆ ಕೂಡಾ ಪಡೆದಿಲ್ಲ. 2ನೇ ಡೋಸ್ ಪಡೆದಿಲ್ಲದವರು ಎರಡನೇ ಡೋಸ್ ಪಡೆಯಬೇಕು. ಬೂಸ್ಟರ್ ಡೋಸ್ ಕೂಡಾ ಪಡೆಯಬೇಕು ಎಂದು ಜನರಲ್ಲಿ ಸುಧಾಕರ್ ಮನವಿ ಮಾಡಿಕೊಂಡರು.
ನೆರೆ ರಾಜ್ಯ ಕೇರಳ, ತಮಿಳುನಾಡು, ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣ ಹೆಚ್ಚಳಗೊಂಡಿವೆ. ಈ ಹಿನ್ನೆಲೆಯಲ್ಲಿ ಜನರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಸದ್ಯದ ಸ್ಥಿತಿಯಲ್ಲಿ ಟೆಸ್ಟ್ ಗಳನ್ನು ಹೆಚ್ಚಳ ಮಾಡುತ್ತಿಲ್ಲ. ವಿಮಾನ ನಿಲ್ದಾಣದಲ್ಲಿ ಮೊದಲಿರುವ ನಿಯಮಗನ್ನೇ ಪಾಲನೆ ನೀಡಲು ಸೂಚಿಸಲಾಗಿದೆ,' ಎಂದು ತಿಳಿಸಿದರು.
12 ವರ್ಷ ಮೇಲ್ಪಟ್ಟ ಮಕ್ಕಳಿಗೂ ಪೋಷಕರು ಲಸಿಕೆ ಕೊಡಿಸಬೇಕು. ಆದಷ್ಟು ಬೇಗ 5 ವರ್ಷ ಮೇಲ್ಪಟ್ಟ ವರಿಗೂ ಲಸಿಕೆ ಬರಲಿದೆ. ಈ ಎಲ್ಲಾ ಅಂಶಗಳನ್ನು ಇವತ್ತಿನ ಸಭೆಯಲ್ಲಿ ಚರ್ಚೆ ಮಾಡಲಾಗುತ್ತದೆ.
ಕ್ರಮ ಮತ್ತು ನಿಯಮಗಳ ಬಗ್ಗೆ ತಜ್ಞರ ಸಲಹೆ ಪಡೆಯುತ್ತೇವೆ ಟೆಸ್ಟಿಂಗ್ ಪ್ರಮಾಣ ಹೆಚ್ಚಳ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವ ಸುಧಾಕರ್, ಪಾಸಿಟಿವಿಟಿ ದರದ ಆಧಾರದಲ್ಲಿ ಟೆಸ್ಟಿಂಗ್ ಜಾಸ್ತಿ ಮಾಡುತ್ತೇವೆ. ತಾಂತ್ರಿಕ ಸಲಹಾ ಸಮಿತಿ ಸಲಹೆ ಮೇರೆಗೆ ನಾವು ಟೆಸ್ಟಿಂಗ್ ಮಾಡ್ತಿದ್ದೇವೆ. ಅನಗತ್ಯ ಟೆಸ್ಟ್ ಬೇಕಾಗಿಲ್ಲ. ನಮಗೆ 4 ನೇ ಅಲೆ ಬಂದರೆ ಆಸ್ಪತ್ರೆಗೆ ಸೇರೋದು ಹೆಚ್ಚಾಗುತ್ತಾ ಅನ್ನೋ ಬಗ್ಗೆ ಚರ್ಚೆ ಮಾಡಬೇಕಿದೆ. ಈ ಬಗ್ಗೆಯೂ ಇವತ್ತಿನ ಮಾಹಿತಿ ಕಲೆ ಹಾಕುತ್ತೇವೆ ಎಂದು ತಿಳಿಸಿದರು.
ದೆಹಲಿ ಸೇರಿದಂತೆ ಕೆಲ ರಾಜ್ಯಗಳಲ್ಲಿ ಸೋಂಕು ಹೆಚ್ಚಾಗಿದೆ. ಅಲ್ಲಿನ ಎಲ್ಲಾ ಮಾಹಿತಿ ಪಡೆದು ರಾಜ್ಯದ ಕ್ರಮಗಳ ಬಗ್ಗೆ ಇವತ್ತು ಚರ್ಚೆ ಮಾಡ್ತೀವಿ. ನಮ್ಮಲ್ಲಿ ಓಮಿಕ್ರಾನ್ ಸಬ್ ವೇರಿಯಂಟ್ ಕಂಡು ಬಂದಿಲ್ಲ. ಈಗಾಗಲೇ ಲ್ಯಾಬ್ ನಿಂದ ಕೇಂದ್ರಕ್ಕೆ ಮಾಹಿತಿ ರವಾನೆ ಆಗಿದೆ.
ವಿಮಾನ ನಿಲ್ದಾಣಗಳಲ್ಲಿ ಕಠಿಣ ನಿಯಮ
ಕೇಂದ್ರದಿಂದ ಇನ್ನು ಅಧಿಕೃತವಾಗಿ ಯಾವುದೇ ಮಾಹಿತಿ ಕೊಟ್ಟಿಲ್ಲ. ಹೀಗಾಗಿ ರಾಜ್ಯದಲ್ಲಿ ಹೊಸ ತಳಿ ಪತ್ತೆ ಬಗ್ಗೆ ಆತಂಕ ಇಲ್ಲ. ಕೊರೊನಾ 4ನೇ ಅಲೆ ಭೀತಿ ಹಿನ್ನೆಲೆ ಏರ್ ಪೋರ್ಟ್ ಗಳಲ್ಲಿ ಕಠಿಣ ನಿಯಮ ಜಾರಿ ಈಗಾಗಲೇ ಮಾಡಲಾಗಿದೆ. ಸೋಂಕು ಹೆಚ್ಚು ಇರುವ 8 ದೇಶಗಳಿಂದ ಬರೋ ಪ್ರಯಾಣಿಕರಿಗೆ ನಿಯಮ ಜಾರಿ ಮಾಡಲಾಗಿದೆ. ಏರ್ ಪೋರ್ಟ್ ನಲ್ಲಿ ಈ ಹಿಂದೆ ಇದ್ದ ಮಾರ್ಗಸೂಚಿಗಳೇ ಮುಂದುವರಿಕೆ ಆಗುತ್ತದೆ ಎಂದು ತಿಳಿಸಿದರು.
ದೆಹಲಿ ಸೇರಿದಂತೆ ಕೆಲ ರಾಜ್ಯದಲ್ಲಿ ಸೋಂಕು ಹೆಚ್ಚಳವಾಗಿದೆ. ನಾವು ದೆಹಲಿಗಿಂತ 2-3 ವಾರ ಹಿಂದೆ ಇದ್ದೀವಿ. 2-3 ವಾರ ಆದ ಮೇಲೆ ನಮ್ಮಲ್ಲಿ ಹೇಗೆ ಸೋಂಕು ಹೆಚ್ಚಳದ ಬಗ್ಗೆ ನಮಗೆ ಗೊತ್ತಾಗಲಿದೆ.
ರಾಜ್ಯದಲ್ಲಿ ಔಷಧಿಯ ಕೊರತೆ ಇಲ್ಲ ಇದೇ ವೇಳೆ ರಾಜ್ಯದಲ್ಲಿ ಔಷಧಿ ಕೊರತೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಸುಧಾಕರ್, ರಾಜ್ಯದಲ್ಲಿ ಔಷಧಿ ಕೊರತೆ ಇಲ್ಲ. ಈಗಾಗಲೇ DHO,THO ಗಳ ಅಕೌಂಟ್ ಗೆ ಹಣ ಹಾಕಿದ್ದೇವೆ. ಸ್ಥಳೀಯವಾಗಿ ಅವಶ್ಯಕವಾದ ಔಷಧಿಗಳನ್ನ ಖರೀದಿಗೆ ಅನುಮತಿ ಕೊಟ್ಟಿದ್ದೇವೆ. ಅವರು ಔಷಧಿ ಖರೀದಿ ಮಾಡಬಹುದು ಎಂದು ಹೇಳಿದರು.
PublicNext
25/04/2022 04:31 pm