ಮಂಟಪ:ರಾಷ್ಟ್ರಕವಿ ಕುವೆಂಪು ಸಂಜೀವಿನಿ ಗ್ರಾಮ ಪಂಚಾಯಿತಿ ಒಕ್ಕೂಟದ ವತಿಯಿಂದ ಗ್ರಾಮ ಪಂಚಾಯಿತಿಯಲ್ಲಿ ಉಚಿತ ಆರೋಗ್ಯ ಶಿಬಿರವನ್ನು ಆಯೋಜನೆ ಮಾಡಲಾಗಿತ್ತು.
ಇಲ್ಲಿನ ಮಂಟಪ ಗ್ರಾಮದ ಪಂಚಾಯಿತಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ಶಿಬಿರ ಕಾರ್ಯಕ್ರಮದಲ್ಲಿ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಎಂ ಕೃಷ್ಣಪ್ಪ ಭಾಗಿಯಾಗಿ ಮಾತನಾಡಿ, ಇತ್ತೀಚೆಗೆ ಕೆಲಸದ ಒತ್ತಡದಿಂದ ಜನರ ಆರೋಗ್ಯ ಹಾಳಾಗುತ್ತಿದೆ. ಹೀಗಾಗಿ ಆರೋಗ್ಯದ ಬಗ್ಗೆ ಗಮನ ಹರಿಸಬೇಕು ಎಂದು ತಿಳಿಸಿದರು.
ಉಚಿತ ಆರೋಗ್ಯ ಶಿಬಿರದಲ್ಲಿ ನುರಿತ ವೈದ್ಯರಿಂದ ಎಲ್ಲ ತರಹದ ಆರೋಗ್ಯ ತಪಾಸಣೆ ಮಾಡಲಾಯಿತು.
Kshetra Samachara
30/04/2022 02:16 pm