ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಡೆಂಘಿ- ಮುನ್ನೆಚ್ಚರಿಕೆಗೆ ಸರಕಾರ ಸೂಚನೆ !

ಬೆಂಗಳೂರು: ಹವಮಾನ‌‌ ಬದಲಾವಣೆ ಹಾಗೂ ಅಕಾಲಿಕ ಮಳೆಯಿಂದಾಗಿ ರಾಜ್ಯದಲ್ಲಿ ಸೊಳ್ಳೆಗಳ ಕಡಿತದಿಂದ ಉಂಟಾಗುವ ಡೆಂಘೀ, ಚಿಕನ್ ಗುನ್ಯಾ ಹಾಗೂ‌ ಮಲೇರಿಯಾ ಹರಡುದು ಹೆಚ್ಚಾಗಿದೆ. ಆದ್ದರಿಂದ ಈ ರೋಗಗಳ ನಿಯಂತ್ರಣಕ್ಕೆ ಆಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈ ಗೊಳ್ಳಬೇಕು ಎಂದು ಆರೋಗ್ಯ ಇಲಾಖೆ ಸೂಚಿಸಿದೆ.

ಈ ಬಗ್ಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕಿ ಅರುಂಧತಿ ಚಂದ್ರಶೇಖರ ಸುತ್ತೋಲೆ ಹೊರಡಿಸಿದ್ದಾರೆ. ಡೆಂಘೀ ಹಾಗೂ ಚಿಕನ್ ಗುನ್ಯಾ ನಿಯಂತ್ರಣಕ್ಕಾಗಿ ಈಡಿಸ್ ಲಾರ್ವಾ ಸಮೀಕ್ಷೆ ಹಾಗೂ ಸೊಳ್ಳೆಗಳ ಉತ್ಪತ್ತಿ ತಾಣಗಳ ನಾಶಕ್ಕೆ ಕ್ರಮವಹಿಸುವಂತೆ ಆರೋಗ್ಯಧಿಕಾರಿಗಳಿಗೆ ಸೂಚಿಸಿದ್ದಾರೆ.

15 ದಿನಕೊಮ್ಮೆ ಪ್ರತಿಮನೆಗಳಲ್ಲಿ ಈಡಿಸ್ ಲಾರ್ವಾ ಸಮೀಕ್ಷೆ ‌ನಡೆಸಬೇಕು.. ಈ ಸಮೀಕ್ಷೆಯಿಂದ ಲಭ್ಯವಾಗುವ ಮಾಹಿತಿಯನ್ನು ವಿಶ್ಲೇಷಿಸಿ, ಅಗತ್ಯ ನಿಯಂತ್ರಣ ಕ್ರಮಕೈಗೊಳ್ಳಬೇಕೆಂದು ತಿಳಿಸಿದ್ದಾರೆ..

Edited By : PublicNext Desk
Kshetra Samachara

Kshetra Samachara

09/06/2022 07:28 pm

Cinque Terre

576

Cinque Terre

0

ಸಂಬಂಧಿತ ಸುದ್ದಿ