ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಗರದಲ್ಲಿ ಕೊರೊನಾ ಜೊತೆ ಡೆಂಘೀ ಪ್ರಕರಣಗಳು ಹೆಚ್ಚುತ್ತಿದೆ..!

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿದೆ. ಬಿಬಿಎಂಪಿ ಕೊರೊನಾ ವರದಿಯ ಪ್ರಕಾರ ಕಳೆದ ಏಳುದಿನಗಳಲ್ಲಿ ಒಟ್ಟು 2,845 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಬಿಬಿಎಂಪಿ ವ್ಯಾಪ್ತಿಯ ಹತ್ತು ವಾರ್ಡ್ ಗಳಲ್ಲಿ ಕೊರೊನಾ ಸೋಂಕಿತರ ಪ್ರಮಾಣ ಹಚ್ಚಾಗಿದೆ.. ಈ ಪೈಕಿ ಮಹದೇವಪುರ‌ ಮತ್ತು ಬೊಮ್ಮನಹಳ್ಳಿ ವಲಯದ ವ್ಯಾಪ್ತಿಯ ವಾರ್ಡ್ ಗಳಲ್ಲಿ ಹೆಚ್ಚು ಪ್ರಕರಣಗಳು ಕಾಣಿಸಿಕೊಂಡಿವೆ.

ಇದರ ಕೊರೊನಾ ಬೆನ್ನಲೆ ಡೆಂಘೀ ಪ್ರಕರಣಗಳು ಹೆಚ್ಚಾಗಿವೆ. ಸಂಗ್ರಹಿಸಿಟ್ಟ ನೀರಿನ ಮೇಲೆ, ಮೋರಿ ನೋರನಮೇಲೆ, ಮೊಟ್ಟೆ ಇಟ್ಟು ಸೊಳ್ಳೆಗಳು ಸಂತಾನೋತ್ಪತ್ತಿ ಮಾಡುತ್ತದೆ. ಇದ್ರಿಂದ ಸೊಳ್ಳೆಗಳು ಸಹ ಹೆಚ್ಚಾಗಿ ಡೆಂಘೀ ಪ್ರಕರಣಗಳು ಹೆಚ್ಚಾಗಿವೆ. ಇನ್ನೂ ರಾಜ್ಯ ಆರೋಗ್ಯ ಇಲಾಖೆಯ ಅಂಕಿ- ಅಂಶಗಳ ಪ್ರಕಾರ ರಾಜ್ಯದಲ್ಲಿ 1,838 ಡೆಂಘೀ ಪ್ರಕರಣಗಳು ವರದಿಯಾಗಿವೆ.

Edited By : PublicNext Desk
Kshetra Samachara

Kshetra Samachara

16/06/2022 07:15 pm

Cinque Terre

584

Cinque Terre

0

ಸಂಬಂಧಿತ ಸುದ್ದಿ