ಬೆಂಗಳೂರು: ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನಲ್ಲಿ ಸ್ಥಳೀಯರು ಮತ್ತು ಬೊಮ್ಮನಹಳ್ಳಿ ಶಾಸಕರಾದ ಸತೀಶ್ ರೆಡ್ಡಿ ಯೋಗ ಮಾಡಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದರು. ಎಚ್ ಎಸ್ ಆರ್ ಲೇಔಟ್ ಅಟಲ್ ಬಿಹಾರಿ ವಾಜಪೇಯಿ ಸ್ಟೇಡಿಯಂನಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಸ್ಥಳೀಯ ನಿವಾಸಿಗಳು ಮತ್ತು ಶಾಲಾ ವಿದ್ಯಾರ್ಥಿಗಳು ಪಾಲ್ಗೊಂಡರು. ಅದರಲ್ಲೂ ಬೊಮ್ಮನಹಳ್ಳಿ ಕ್ಷೇತ್ರದ ಸರಕಾರಿ ಶಾಲೆ ಮಕ್ಕಳು ಕೂಡ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದರು. ಕಾರ್ಯಕ್ರಮದಲ್ಲಿ ಎರಡು ಸಾವಿರ ಜನ ಸೇರಿ ಯೋಗ ಮಾಡಿದರು ಮತ್ತು ಸ್ಥಳೀಯ ಶಾಸಕರಾದ ಸತೀಶ್ ರೆಡ್ಡಿ ಕೂಡ ಜನರೊಂದಿಗೆ ಕುಳಿತು ಯೋಗ ಮಾಡಿದರು.
ನವೀನ್ ಪಬ್ಲಿಕ್ ನೆಕ್ಸ್ಟ್ ಬೆಂಗಳೂರು
Kshetra Samachara
21/06/2022 03:38 pm