ಬೆಂಗಳೂರು: ಮಲ್ಲೇಶ್ವರಂನ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ಉದ್ಘಾಟನೆಗೆ ಸಜ್ಜಾಗಿರುವ ಜಯದೇವ ಹೃದ್ರೋಗ ಸಂಸ್ಥೆಯ 50 ಹಾಸಿಗೆಗಳ ತುರ್ತು ಉಪಘಟಕವನ್ನು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಸೋಮವಾರ ಪರಿಶೀಲಿಸಿದರು.
ಎರಡೂ ಆಸ್ಪತ್ರೆಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಕ್ಟೋಬರ್ 4 ರಂದು ಉದ್ಘಾಟಿಸುವ ಸಾಧ್ಯತೆ ಇದೆ. ಜಯದೇವ ಹೃದ್ರೋಗ ಆಸ್ಪತ್ರೆಯ ಉಪಘಟಕದಿಂದ ಬೆಂಗಳೂರು ಉತ್ತರ ಭಾಗದ ಜನರಿಗೆ ಸುಗಮವಾಗಿ ಮತ್ತು ಸುಲಭವಾಗಿ ಹೃದಯ ಚಿಕಿತ್ಸೆ ದೊರೆಯಲಿದೆ. ಇದಕ್ಕಾಗಿ 15 ಕೋಟಿ ರೂಪಾಯಿ ವಿನಿಯೋಗಿಸಲಾಗಿದೆ ಎಂದರು.
ಕೊರೋನಾ ಸಂದರ್ಭದಲ್ಲಿ ಸರಕಾರವು ಕೊಟ್ಟು ಮಿಕ್ಕಿದ್ದ ಹಣವನ್ನು ಇದಕ್ಕೆ ಬಳಸಿಕೊಳ್ಳಲಾಗಿದೆ. ಉಪಕರಣಗಳಿಗೆ ಆಗುವ ವೆಚ್ಚವನ್ನು ಜಯದೇವ ಹೃದ್ರೋಗ ಸಂಸ್ಥೆಯೇ ಭರಿಸಿದೆ. ಈ ಉಪಘಟಕವನ್ನು ಆ ಸಂಸ್ಥೆಯೇ ನಿರ್ವಹಿಸಲಿದೆ. ಈ ಉಪಘಟಕದಲ್ಲಿ ಕ್ಯಾತ್ ಲ್ಯಾಬ್ ಸೇರಿದಂತೆ ಹೃದ್ರೋಗಕ್ಕೆ ಸಂಬಂಧಿಸಿದ ಎಲ್ಲಾ ಚಿಕಿತ್ಸೆಗಳಿಗೆ ಅನುಕೂಲವಿದೆ ಎಂದರು.
ಎಳೆಯ ಮಕ್ಕಳಿಗೆ ಕಂಡುಬರುವ ಆರೋಗ್ಯ ಸಂಬಂಧಿ ಸಮಸ್ಯೆಗಳಿಗೂ ಇನ್ನು ಮುಂದೆ ಕೆ.ಸಿ. ಜನರಲ್ ಆಸ್ಪತ್ರೆಯ ಆವರಣದಲ್ಲೇ ಅತ್ಯುತ್ತಮ ಚಿಕಿತ್ಸೆ ಸಿಗಲಿದೆ ಎಂದು ಅವರು ಮಾಹಿತಿ ನೀಡಿದರು.
Kshetra Samachara
26/09/2022 05:52 pm