ಬೆಂಗಳೂರು: ಪವಿತ್ರ ಅಮರನಾಥ ಯಾತ್ರೆ ಸಂದರ್ಭದಲ್ಲಿ ಮೇಘಸ್ಪೋಟದಿಂದಾಗಿ 12 ಜನ ಯಾತ್ರಾರ್ಥಿಗಳು ಸಾವನ್ನಪ್ಪಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಂಬನಿ ಮಿಡದಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಮುಖ್ಯಮಂತ್ರಿಗಳು ಮೇಘ ಸ್ಫೋಟದಿಂದಾಗಿ ಸಾವನ್ನಪ್ಪಿರುವ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ಈ ಮೇಘ ಸ್ಫೋಟದಲ್ಲಿ ಜೀವ ಕಳೆದುಕೊಂಡ ಜನರ ಆತ್ಮಗಳಿಗೆ ಶಾಂತಿ ಸಿಗಲಿ. ಇವರ ಅಗಲಿಕೆಯ ನೋವನ್ನು ಬರಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬದವರಿಗೆ ನೀಡಲಿ ಎಂದು ಟ್ರೀಟ್ ನಲ್ಲಿ ಪ್ರಾರ್ಥಿಸಿದ್ದಾರೆ.
Kshetra Samachara
09/07/2022 09:27 am