ಬೊಮ್ಮನಹಳ್ಳಿ: ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಹುಲಿಮಾವು ಸೋಮೇಶ್ವರ ಬಡಾವಣೆಯಲ್ಲಿ ಕಾಂಕ್ರೀಟ್ ರಸ್ತೆ ಹಾಗೂ ಸುಸಜ್ಜಿತ ಚರಂಡಿಗಳ ಕಾಮಗಾರಿಗೆ ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಚಾಲನೆ ನೀಡಿದರು. ಜೊತೆಗೆ ಕಾರ್ಯಕರ್ತರು ಮತ್ತು ಮುಖಂಡರು ಜೊತೆಗೂಡಿ ಸ್ಥಳಕ್ಕೆ ಭೇಟಿಕೊಟ್ಟು ಪರಿಶೀಲನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ನಿಕಟಪೂರ್ವ ಬಿಬಿಎಂಪಿ ಸದಸ್ಯ ಪುರುಷೋತ್ತಮ ರವಿ,ಮಾಜಿ ನಗರಸಭಾ ಸದಸ್ಯ ಮುರಳಿ ಅವರು ಹಾಗೂ ಸ್ಥಳೀಯ ಮುಖಂಡರು ಹಾಗೂ ನಿವಾಸಿಗಳು ಭಾಗಿಯಾಗಿದ್ದರು.
Kshetra Samachara
07/10/2022 01:23 pm